ರಾಜ್ಯ

ಬೆಳೆ ಸಾಲ ಮನ್ನಾದಲ್ಲಿ ನ್ಯೂನತೆಯನ್ನು ಸಹಿಸುವುದಿಲ್ಲ; ಸಿಎಂ ಕುಮಾರಸ್ವಾಮಿ

Sumana Upadhyaya

ಬೆಂಗಳೂರು: ರೈತರಿಗೆ ಬೆಳೆಸಾಲ ಮನ್ನಾ ಪೂರೈಕೆಯಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಡೆಯಲು ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಆಯುಕ್ತರು ಮತ್ತು ಎಲ್ಲಾ ಇಲಾಖೆಗಳ ಮುಖ್ಯಸ್ಥರನ್ನುದ್ದೇಶಿಸಿ ಮಾತನಾಡಿ ಬೆಳೆಸಾಲ ಜಾರಿಯಲ್ಲಿ ಯಾವುದೇ ನ್ಯೂನತೆ ಕಂಡುಬಂದರೆ ತಾವು ಸಹಿಸುವುದಿಲ್ಲ ಎಂದಿದ್ದಾರೆ.

ಸಾಲಮನ್ನಾ ಯೋಜನೆ ಜಾರಿಗೆ ಸರ್ಕಾರ ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸಿದೆ. ಅನುಷ್ಠಾನದ ಸಂದರ್ಭದಲ್ಲಿ ಮಧ್ಯವರ್ತಿಗಳು ಈ ಹಣವನ್ನು ದುರುಪಯೋಗ ಪಡಿಸಿಕೊಳ್ಳದಂತೆ ಎಚ್ಚರ ವಹಿಸಿ ಎಂದು  ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸಾಲ ಮನ್ನಾ ಸರ್ಕಾರದ ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದೆ. ಈಗಾಗಲೇ ಜಿಲ್ಲೆಗಳಲ್ಲಿ ಬ್ಯಾಂಕುಗಳು ಸಾಲ ಪಡೆದ ರೈತರ ಮಾಹಿತಿ ಒದಗಿಸಿರುವ ಬಗ್ಗೆ  ಸಭೆಯಲ್ಲಿ ವಿವರಗಳನ್ನು ಒದಗಿಸುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದರು.

ಜೊತೆಗೆ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ 'ಬಡವರ ಬಂಧು'. ಬೀದಿ ಬದಿ ವ್ಯಾಪಾರಿಗಳು ಖಾಸಗಿಯವರಿಂದ ಸಾಲ ಪಡೆದು ತೀರಿಸಲಾಗದೆ ದೌರ್ಜನ್ಯಕ್ಕೆ ಒಳಗಾಗುವ ನಿದರ್ಶನಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಇಂತಹ ಸಣ್ಣ ವ್ಯಾಪಾರಿಗಳಿಗೆ ರಕ್ಷಣೆ ನೀಡುವಂತೆ ನಿರ್ದೇಶನ ನೀಡಿದರು.

SCROLL FOR NEXT