ಬೆಂಗಳೂರು: ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅದನ್ನು ನಿಗದಿತ ಸಮಯದೊಳಗೆ ಮುಗಿಸಲು ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ನಿರ್ಮಾಣ ಕೆಲಸ ಆರಂಭಿಸುವುದು ಮಾತ್ರವಲ್ಲದೆ ಮೇಕೆದಾಟು ಯೋಜನೆ ಬಗ್ಗೆ ಸಮಗ್ರ ಯೋಜನಾ ವರದಿ ತಯಾರಿಸಿ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ರಾಜ್ಯ ಸರ್ಕಾರ ಸಲ್ಲಿಸಬೇಕು ಎಂದು ಕೂಡ ಅವರು ಒತ್ತಾಯಿಸಿದ್ದಾರೆ.
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ಮತ್ತು ಜಲಾಶಯ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ತಂಡ ಅನುಮತಿ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಅವರು, ಕೋಲಾರ ಮತ್ತು ಬೆಂಗಳೂರಿನ ಜನತೆಗೆ ಇದರಿಂದ ನೀರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.