ದುನಿಯಾ ವಿಜಯ್ 
ರಾಜ್ಯ

ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಗೆ ಜಾಮೀನು

ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ...

ಬೆಂಗಳೂರು: ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅವರು, 1 ಲಕ್ಷ ರುಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಎಚ್ಚರಿಕೆ ನೀಡಿದ್ದಾರೆ.
ಜಾಮೀನು ನೀಡಿದ್ದೇನೆ. ಮುಂದೆ ಹೀಗೆ ವರ್ತಿಸದಿರಿ, ಹೀರೋ ಆಗಿ ಇತರರಿಗೆ ಮಾದರಿಯಾಗಬೇಕು ಎಂದು ಕೋರ್ಟ್, ದುನಿಯಾ ವಿಜಯ್ ಪರ ವಕೀಲರಿಗೆ ಸೂಚಿಸಿದೆ. 
ಮ್ಕ್ಯಾಜಿಸ್ಟ್ರೇಟ್ ಕೋರ್ಟ್ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ, ಆರೋಪಿ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 
ಪ್ರಕರಣಕ್ಕೆ ಸಂಬಂಧಿಸಿದಂತೆ ದುನಿಯಾ ವಿಜಯ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

'Happy Birthday... Please Resign'; ಧರ್ಮೇಂದ್ರ ಪ್ರಧಾನ್‌ಗೆ ವಿನೂತನವಾಗಿ ಶುಭ ಹಾರೈಸಿದ Cockroach Janta Party