ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 22 ಬಾರಿ ಪತ್ನಿಯ ಹೊಟ್ಟೆಗೆ ಇರಿದು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ಪತಿ!

ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೊಟ್ಟೆಗೆ 22 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕೋಣನಕುಂಟೆಯ ಬಳಿ ನಡೆದಿದೆ....

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೊಟ್ಟೆಗೆ 22 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕೋಣನಕುಂಟೆಯ ಬಳಿ ನಡೆದಿದೆ.
ಗೀತಾ ಕೊಲೆಯಾದ ದುರ್ದೈವಿ. ಕೋಣನಕುಂಟೆಯ ರಾಯಲ್ ಕೌಂಟಿ ಬಳಿ ಇರುವ ಅಪಾರ್ಟ್ ಮೆಂಟ್‍ನ ಆವರಣದಲ್ಲಿ ಈ ಘಟನೆ ನಡೆದಿದೆ. ಚಳ್ಳಕೆರೆ ಮೂಲದ ಕುಮಾರ್ ಮತ್ತು ಗೀತಾ ಮದುವೆಯಾಗಿ 12 ವರ್ಷಗಳಾಗಿತ್ತು. ಕುಮಾರ್ ಅಪಾರ್ಟ್ ಮೆಂಟ್‍ನಲ್ಲಿ ಸೆಕ್ಯೂರಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಗೀತಾ ಮನೆ ಕೆಲಸ ಮಾಡುತ್ತಿದ್ದಳು. ಇಬ್ಬರಿಗೆ 10 ವರ್ಷದ ಮಗನಿದ್ದಾನೆ. 
ಪ್ರತಿದಿನ ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿದ್ದರು ಆಕೆಯ ಮೇಲೆ ಕುಮಾರ್ ಅನುಮಾನ ಪಡುತ್ತಿದ್ದ. ಸೋಮವಾರ ರಾತ್ರಿ 7.30ಕ್ಕೆ  ಕೆಲಸದಿಂದ ಬಂದ ಆತ ಜಗಳ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಸದ್ದು ಮಾಡದಂತೆ ನೆರೆಹೊರೆಯವರು ಎಚ್ಚರಿಕೆ ನೀಡಿದ್ದರು, ನಂತರ ಕುಪಿತ ಪತಿ ಕುಮಾರ್, ಗೀತಾ ಅವರ ಹೊಟ್ಟೆಗೆ 22 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಕುಮಾರ್ ತನ್ನ ಹೊಟ್ಟೆಗೂ 5 ಬಾರಿ ಚುಚ್ಚಿಕೊಂಡಿದ್ದಾನೆ. ತಕ್ಷಣವೇ ಅಲ್ಲಿದ್ದವರು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯಕ್ಕೆ ಗೀತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!