ಸಂಗ್ರಹ ಚಿತ್ರ 
ರಾಜ್ಯ

ಪ್ರತೀಕಾರಕ್ಕಾಗಿ ಬೆಂಗಳೂರು ವೈದ್ಯೆಯ ಖಾಸಗಿ ಫೋಟೋಗಳನ್ನು ಶೇರ್ ಮಾಡಿದ ಮಾಜಿ ಪ್ರಿಯಕರ!

ಮಾಜಿ ಪ್ರೇಯಸಿ ಮೇಲೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಪ್ರಿಯಕರನೊಬ್ಬ ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ...

ಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಪ್ರಿಯಕರನೊಬ್ಬ ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ. 
ಚೆನ್ನೈ ಮೂಲದ 26 ವರ್ಷದ ವೈದ್ಯೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದು ಆಕೆ ತನ್ನ ವಿರುದ್ಧ ಮಹಿಳಾ ಸಹಾಯವಾಣಿಗೆ ದೂರು ನೀಡಿದ್ದರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರ ಆಕೆಯ ಫೋಟೋಗಳನ್ನು ಸೋಷಿಯಲ್ ಮೀಡಿಯದಲ್ಲಿ ಶೇರ್ ಮಾಡಿದ್ದಾನೆ.
ಮಾಜಿ ಪ್ರಿಯಕರ ವೈದ್ಯೆಯ ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ಚಿನ್ನಾಭರಣ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಮರಳಿಸಲು ನಿರಾಕರಿಸಿದ್ದ. ಇದರಿಂದಾಗಿ ಯುವತಿ ಮಹಿಳಾ ಸಹಾಯವಾಣಿಗೆ ದೂರು ನೀಡಿದ್ದರು. 
ಇಬ್ಬರು ಕಾಲೇಜು ದಿನಗಳಿಂದ ಪ್ರೀತಿಸುತ್ತಿದ್ದು ಬೆಂಗಳೂರಿಗೆ ಬಂದ ನಂತರ ಕಳೆದೆರೆಡು ವರ್ಷಗಳಿಂದ ಸಹ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚಿಗೆ ಈ ಇಬ್ಬರು ಬೇರೆ ಬೇರೆಯಾಗಿದ್ದರು ಎಂದು ಹೇಳಲಾಗಿದೆ. 
ಯುವತಿ ಮಹಿಳಾ ಸಹಾಯವಾಣಿಗೆ ದೂರು ನೀಡಿದ ನಂತರ ಮಾಜಿ ಪ್ರಿಯಕರ ತನ್ನ ವಕೀಲರೊಂದಿಗೆ ಆಗಮಿಸಿ ಯುವತಿಯ ಅಮೂಲ್ಯ ವಸ್ತುಗಳು ಹಾಗೂ 2 ಲಕ್ಷ ರುಪಾಯಿ ಹಣ ಹಿಂತಿರುಗಿಸಿದ್ದಾನೆ. ಆದರೆ ತನ್ನ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಸಂಬಂಧ ಯುವತಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT