ಬೆಂಗಳೂರು: ಎರಡನೇ ಆರು ಕೋಚ್ ಮೆಟ್ರೋ ರೈಲಿಗೆ ಸಿಎಂ ಕುಮಾರಸ್ವಾಮಿ ಚಾಲನೆ 
ರಾಜ್ಯ

ಬೆಂಗಳೂರು: ಎರಡನೇ ಆರು ಕೋಚ್ ಮೆಟ್ರೋ ರೈಲಿಗೆ ಸಿಎಂ ಕುಮಾರಸ್ವಾಮಿ ಚಾಲನೆ

6 ಹೋಗಿಗಳ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರಕ್ಕೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಚಾಲನೆ ನೀಡಿದರು...

ಬೆಂಗಳೂರು: 6 ಹೋಗಿಗಳ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರಕ್ಕೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಚಾಲನೆ ನೀಡಿದರು. 
2ನೇ 6 ಬೋಗಿಗಳ ರೈಲು ಸೇವೆಯ ಕಾರ್ಯಾರಂಭಕ್ಕೆ ಚಾಲನೆ ನೀಡುವುದಕ್ಕೂ ಮನ್ನ ರೂ.1.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೆಎಸ್ಆರ್'ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕಿಸುವ ಕಾಲ್ಸೇತುವೆಗೆ ಕುಮಾರಸ್ವಾಮಿಯವರು ಚಾಲನೆ ನೀಡಿದರು. 
ಬಳಿಕ 11.45ರ ಸುಮಾರಿಗೆ 6 ಬೋಗಿಗಳ ರೈಲು ಸೇವೆಗೆ ಚಾಲನೆ ನೀಡಿದರು. ನಂತರ ಮುಖ್ಯಮಂತ್ರಿಗಳು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಗಸಂದ್ರ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣ ಮಾಡಿದರು. 
ಕುಮಾರಸ್ವಾಮಿಯವರೊಂದಿಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಚಿವ ಡಿ.ಸಿ.ತಮ್ಮಣ್ಣ ಅವರು ಸಾಥ್ ನೀಡಿದರು. 
2ನೇ ಹಂತದಲ್ಲಿ ಬೆಮಲ್ ಸಂಸ್ಥೆ ಮೂರು ಬೋಗಿಗಳನ್ನು ಬಿಎಂಆರ್'ಸಿಎಲ್'ಗೆ ಹಸ್ತಾಂತರ ಮಾಡಿತ್ತು. ಆರು ಬೋಗಿಗಳ ರೈಲಾಗಿ ಪರಿವರ್ತಿಸಿದ ಬಳಿಕ ನಡೆಸಿದ ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದಲ್ಲಿ (ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗ) ಮತ್ತೊಂದು ಆರು ಬೋಗಿಗಳ ರೈಲು ಸಂಚಾರ ನಡೆಸುತ್ತಿದೆ.
 ಮೊದಲ ಹಂತದಲ್ಲಿ ಫೆ.14 ರಂದು ಬೆಮೆಲ್ ಸಂಸ್ಥೆ ಮೂರು ಬೋಗಿಗಳನ್ನು ಬಿಎಂಆರ್'ಸಿ ಸಂಸ್ಥೆಗೆ ವರ್ಗಾವಣೆ ಮಾಡಿತ್ತು. ಜೂ.22ರಂದು ಮೊದಲ 6 ಬೋಗಿಗಳ ಮೆಟ್ರೋಗೆ ಚಾಲನೆ ನೀಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!