ಬೆಂಗಳೂರು: ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ, ಸೂಚನೆಯನ್ನು ನಿರ್ಲಕ್ಷಿಸಿ ಜಾಹಿರಾತು ಫಲಕ ಹಾಕಿದ ಹಿನ್ನೆಲೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸೋಮವಾರ ಎಫ್ಐಆರ್ ದಾಖಲಾಗಿದೆ.
ಅನಧಿಕೃತ ಜಾಹೀರಾತು ಫಲಕ ಅವಳವಡಿಸಿದ ಹಿನ್ನಲೆಯಲ್ಲಿ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್ ಅವರು ನೀಡಿದ ದೂರಿನ ಅನ್ವಯ ಎಫ್ಐರ್ ದಾಖಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಮೈಸೂರು ರಸ್ತೆಯ ಪಂತರಪಾಳ್ಯದಲ್ಲಿದ್ದ ಶಿವಕುಮಾರ್ ಮಾಲೀಕತ್ವದ ಜಮೀನಿನಲ್ಲಿ ಅನಧಿಕೃತ ಜಾಹೀರಾತುಗಳನ್ನು ಹಾಕಲಾಗಿತ್ತು. ಈ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಆ ನೋಟಿಸ್'ಗೆ ಸಚಿವರು ಕ್ಯಾರೆ ಎಂದಿಲ್ಲ.
ಈ ಹಿನ್ನಲೆಯಲ್ಲಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರೆಂದು ತಿಳಿದುಬಂದಿದೆ.