ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅ.13 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಎಚ್‌ಎಎಲ್ ನೌಕರರ ಜೊತೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂವಾದದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ
ರಫೆಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಕುರಿತು ಕೇಂದ್ರ ಸರ್ಕಾರ ಎಚ್‌ಎಎಲ್ ಬಗ್ಗೆ ತಾಳಿರುವ ನಿಲುವಿನ ಕುರಿತಾಗಿ ರಾಹುಲ್ ಗಾಂಧಿ ಎಚ್‌ಎಎಲ್ ಸಿಬ್ಬಂದಿ ಜತೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ.
ಸಂವಾದದ ನಂತರ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ರಾಹುಲ್ ಸಭೆ ನಡೆಸಲಿದ್ದಾರೆ, ಆಗಸ್ಟ್ 13 ರಂದು ರಾಜ್ಯಕ್ಕೆ ಆಗಮಿಸಿದ್ದ ರಾಹುಲ್ ಜನದ್ವನಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.