ರಾಜ್ಯ

ದಸರಾ ಸಂಭ್ರಮಕ್ಕೆ ನೀತಿ ಸಂಹಿತೆ ಅಡ್ಡಿಯಿಲ್ಲ: ಕೇಂದ್ರ ಚುನಾವಣಾ ಆಯೋಗ

Manjula VN
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಉಪ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. 
ಚುನಾವಣಾ ಆಯೋಗ ಸ್ಪಷ್ಟನೆ ನೀಡಿರುವ ಹಿನ್ನಲೆಯಲ್ಲಿ ದಸರಾ ಸಂಭ್ರಮಕ್ಕೆ ಇದ್ದ ಅಡ್ಡಿ ಹಾಗೂ ಆತಂಕಗಳು ದೂರಾಗಿವೆ. 
ಕೆ.ಆರ್. ನಗರ ವಿಧಾನಸಭಾ ಕ್ಷೇತ್ರವು ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಹೀಗಾಗಿ ಚುನಾವಣಾ ದಿನಾಂಕ ಪ್ರಕಟಗೊಂಡ ಕೂಡಲೇ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿತ್ತು. ಇದರಿಂದಾಗಿ ಗೊಂದಲ ಸೃಷ್ಟಿಗೊಂಡಿತ್ತು. 
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆಯೋಗಕ್ಕೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದರು. ಜೊತೆಗೆ ಮೈಸೂರು ದಸರಾ ವಿಶ್ವವಿಖ್ಯಾತ ನಾಡಹಬ್ಬವಾಗಿರುವುದರಿಂದ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆಯೂ ಮನವಿ ಮಾಡಿಕೊಂಡಿದ್ದರು. 
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಆಯೋಗ, ಕೆ.ಆರ್. ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ಗ್ರಾಮೀಣ ದಸರಾ ರದ್ದಾಗಲಿದ್ದು, ಉಳಿದಂತೆ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದೆ. ಅಲ್ಲದೆ, ಚುನಾಯಿತ ಪ್ರತಿನಿಧಿಗಳೂ ಪಾಲ್ಗೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ. 
SCROLL FOR NEXT