ಬಿಬಿಎಂಪಿ ಮೇಯರ್ 
ರಾಜ್ಯ

ಕಲಾಸಿಪಾಳ್ಯ ಮಾರುಕಟ್ಟೆ ಅವ್ಯವಸ್ಥೆ ಕಂಡು ಗರಂ: ಎಪಿಎಂಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮೇಯರ್

ಕಲಾಸಿಪಾಳ್ಯ ಮಾರುಕಟ್ಟೆ ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರತೀ ತಿಂಗಳು ರೂ.11 ಲಕ್ಷ ವ್ಯಯ ಮಾಡುತ್ತಿದ್ದರೂ, ಮಾರುಕಟ್ಟೆ ಅವ್ಯವಸ್ಥೆಯಲ್ಲಿರುವುದನ್ನ ಕಂಡ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು...

ಬೆಂಗಳೂರು: ಕಲಾಸಿಪಾಳ್ಯ ಮಾರುಕಟ್ಟೆ ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರತೀ ತಿಂಗಳು ರೂ.11 ಲಕ್ಷ ವ್ಯಯ ಮಾಡುತ್ತಿದ್ದರೂ, ಮಾರುಕಟ್ಟೆ ಅವ್ಯವಸ್ಥೆಯಲ್ಲಿರುವುದನ್ನ ಕಂಡ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿದ್ದು, ಎಪಿಎಂಸಿ ಅಧಿಕಾರಿಗಳನ್ನು ಗುರುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 
ಕಲಾಸಿಪಾಳ್ಯ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಪರಿಶೀಲನೆ ನಡೆಸಿದ ಮೇಟಲ್ ನಿಲ್ದಾಣದ ಬದಿಯಲ್ಲೇ ರಾಶಿ ಹಾಕಿರುವ ತ್ಯಾಜ್ಯ, ರಸ್ತೆಯ ಕೊಚ್ಚೆ, ದುರ್ವಾಸನೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 
ಕಲಾಸಿಪಾಳ್ಯ ನಿರ್ವಹಣೆಗೆ ಪ್ರತೀ ತಿಂಗಳೂ ನಮಗೆ ಬಿಲ್ ಗಳನ್ನು ಕಳುಹಿಸುತ್ತಾರೆ. ಆದರೆ, ಇಲ್ಲಿ ಯಾವುದೇ ಕಾರ್ಯಗಳೂ ನಡೆಯದೇ ಇರುವುದು ಎದ್ದು ಕಾಣುತ್ತಿದೆ. ಹೀಗಾಗಿ ಎಪಿಎಂಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಪ್ರತೀ ನಿತ್ಯ ಸ್ವಚ್ಛತಾ ಕಾರ್ಯ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 
ನಾಲ್ಕು ದಿನಗಳೊಳಗಾಗಿ ತ್ಯಾಜ್ಯಗಳ ರಾಶಿಯನ್ನು ತೆಗೆಯುವಂತೆ ಸೂಚಿಸಲಾಗಿದೆ. ಎಪಿಎಂಪಿ ಕಾರ್ಯ ತೃಪ್ತಿತರದೇ ಹೋದಲ್ಲಿ ಪ್ರತೀ ತಿಂಗಳು ನೀಡಲಾಗುತ್ತಿರುವ ರೂ.11 ಲಕ್ಷ ಸ್ಥಗಿತಗೊಳಿಸಲಾಗುತ್ತದೆ. ಅಧಿಕಾರಿಗಳು ತಪಾಸಣೆಗೆ ಬರುವಾಗ ಮಾತ್ರ ಸ್ವಚ್ಛತಾ ಕಾರ್ಯಗಳನ್ನು ನಡೆಸುತ್ತಿದ್ದಾರೆಂಬ ಮಾಹಿತಿ ಬಂದಿದೆ. ಇದೇ ರೀತಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ, ಪರಿಸ್ಥಿತಿ ಪರಿಶೀಲಿಸುತ್ತೇನೆಂದು ಗಂಗಾಂಬಿಕೆಯವರು ಹೇಳಿದ್ದಾರೆ. 
ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸಲು ಶೀಘ್ರದಲ್ಲಿಯೇ ಬಿಬಿಎಂಪಿ ಮುಖ್ಯ ಕಚೇರಿಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ಚಿಂತನೆಗಳನ್ನು ನಡೆಸಲಾಗುತ್ತಿದೆ. ಕ್ಯಾಮೆರಾಗಳು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತದೆ ಎಂದು ನಾನು ಭರವಸೆ ನೀಡುವುದಿಲ್ಲ. ಆದರೆ, ಇದರಿಂದ ಭಯವಂತೂ ಇರುತ್ತದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಸ್ ನಿಲ್ದಾಣಗಳ ಬಳಿ ನಡೆಸಲಾಗುತ್ತಿರುವ ವೈಟ್ ಟಾಂಪಿಕ್ ಕಾರ್ಯಗಳ ಕುರಿತಂತೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮೇಯರ್ ಸೂಚಿಸಿದ್ದಾರೆ .
ಕೆ.ಜಿ.ಎನ್.ರೋಡ್ ಲೈನ್ಸ್ ಅಂಗಡಿಯವರು ಟೈರ್ ಗಳನ್ನು ಪಾದಚಾರಿ ಮಾರ್ಗದಲ್ಲಿ ಜೋಡಿಸಿಕೊಂಡಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ಇದನ್ನು ಕಂಡು ಅಕ್ರೋಶಗೊಂಡ ಮೇಯರ್ ಕೂಡಲೇ ಟೈರ್ ಗಳ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅಂಗಡಿ ಮಾಲೀಕರಿಗೆ ರೂ.10 ಸಾವಿರ ದಂಡ ವಿಧಿಸುವಂತೆ ಆದೇಶಿಸಿದ್ದಾರೆ. 
ಮಾರುಕಟ್ಟೆಯಲ್ಲಿ ಅಭಿವೃದ್ಧಿ ಕಾರ್ಯ ಶೇ.55 ರಷ್ಟು ಪೂರ್ಣ
ನಂತರ ಕಲಾಸಿಪಾಳ್ಯ ಸಗಟು ಮಾರುಕಟ್ಟೆ ಪರಿಶೀಲಿಸಿದ ಅವರು, ರೂ.9.29 ಕೋಟಿ ವೆಚ್ಚದಲ್ಲಿ ಮಾರುಕಟ್ಟೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಇಲ್ಲಿನ 3 ಘಟಕಗಳಲ್ಲಿ ಒಟ್ಟಾರಿ 382 ಅಂಗಡಿಗಳಿದ್ದು, ಅವುಗಳ ಚಾವಣಿ ಪುನರ್ ನಿರ್ಮಾಣ ಕಾಮಗಾರಿ, ಒಳಚರಂಡಿ ವ್ಯವಸ್ಥೆ, ಶೌಚಾಲಯ, ಬೋರ್ವೆಲ್ ಕೈಗೆತ್ತಿಕೊಳ್ಳಲಾಗಿದೆ. ಶೇ.55 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ