ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಮಹಿಳೆಯನ್ನು ವಂಚಿಸಿದ್ದ 26 ವರ್ಷದ ವ್ಯಕ್ತಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರಿನ ನಿವಾಸಿಯಾಗಿರುವ ನವೀನ್ ಕುಮಾರ್ ಬಂಧಿತ ವ್ಯಕ್ತಿಯಾಗಿದ್ದು, ಆರ್ ಟಿ ನಗರದ ಹೆಲ್ತ್ ಕ್ಲಬ್ ನಲ್ಲಿ ಬೋಧಕಿಯಾಗಿರುವ ಮಹಿಳೆಗೆ ನವೀನ್ ಕುಮಾರ್ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾರೆ. ಮೊದಲು ಮಹಿಳೆಯ ವಿಶ್ವಾಸ ಗಳಿಸಿದ ವ್ಯಕ್ತಿ ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿ ಉದ್ಯೋಗ ಕೊಡಿಸುತ್ತೇನೆ, ಇದಕ್ಕಾಗಿ ಹಣ ಖರ್ಚು ಮಾಡಬೇಕೆಂದು ಹೇಳಿದ್ದಾನೆ.
ಹಲವು ವಹಿವಾಟುಗಳಲ್ಲಿ 11 ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 5.8 ಲಕ್ಷ ರೂಪಾಯಿಗಳನ್ನು ವರ್ಗವಣೆ ಮಾಡಿಸಿಕೊಂಡು ಮೋಸ ಮಾಡಿದ್ದಾನೆ. ಆ ನಂತರ ತನ್ನಿಂದ ಹಣ ಪಡೆದಿದ್ದ ವ್ಯಕ್ತಿ ತನ್ನಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಬಳಿಕವಷ್ಟೇ ತಾನು ವಂಚನೆಗೊಳಗಾಗಿದ್ದೇನೆ ಎಂದು ತಿಳಿದ ಮಹಿಳೆ ಸೈಬರ್ ಕ್ರೈಮ್ ನಲ್ಲಿ ದೂರು ದಾಖಲಿಸಿದ್ದಾರೆ.