ಸಂಗ್ರಹ ಚಿತ್ರ 
ರಾಜ್ಯ

ಕೆಂಪೇಗೌಡ ಪ್ರಶಸ್ತಿ: ಪ್ರಶಸ್ತಿ ಆಯ್ಕೆ ಮಾರ್ಗಸೂಚಿಗೆ ಸಮಿತಿ ರಚಿಸುವಂತೆ ಡಿಸಿಎಂಗೆ ಬಿಬಿಎಂಪಿ ಪತ್ರ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕುರಿತು ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು, ಪ್ರಶಸ್ತಿ ಆಯ್ಕೆ ಮಾರ್ಗಸೂಚಿಗೆ ಸಮಿತಿ ರಚಿಸುವಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದೆ ಎಂದು ಭಾನುವಾರ ತಿಳಿದುಬಂದಿದೆ...

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಕುರಿತು ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು, ಪ್ರಶಸ್ತಿ ಆಯ್ಕೆ ಮಾರ್ಗಸೂಚಿಗೆ ಸಮಿತಿ ರಚಿಸುವಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದೆ ಎಂದು ಭಾನುವಾರ ತಿಳಿದುಬಂದಿದೆ. 
ಪ್ರಶಸ್ತಿಗೆ ಆಯ್ಕೆ ಆದವರ ಪಟ್ಟಿ ಪ್ರಕಟವಾದ ನಂತರ ಕೂಡ ಪಾಲಿಕೆ ಸದಸ್ಯರು ಹಾಗೂ ರಾಜಕೀಯ ಮುಖಂಡರು ಬಿಬಿಎಂಪಿ ಮೇಯಲ್ ಮೇಲೆ ಒತ್ತಡ ಹೇರಿ ತಮಗೆ ಬೇಕಾದವರ ಹೆಸರುಗಳನ್ನು ಅಂತಿಮ ಕ್ಷಣದಲ್ಲಿ ಸೇರ್ಪಡೆಗೊಳಿಸುತ್ತಿದ್ದರು. ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದಂತೆಯೇ ವೇದಿಕೆಯಲ್ಲಿಯೇ ಹೊಸ ಹೆಸರುಗಳನ್ನು ಸೇರ್ಪಡೆ ಮಾಡಲಾಗುತ್ತಿತ್ತು. 
ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ಶಿಸ್ತಿನಿಂದ ನಡೆಯುತ್ತಿರಲಿಲ್ಲ. ಪ್ರಶಸ್ತಿ ಪುರಸ್ಕೃತರನ್ನು ಗೌರವಯುತವಾಗಿ ನಡೆಸಿಕೊಳ್ಳುವ ವ್ಯವಸ್ಥೆಯನ್ನೂ ಕೂಡ ಪಾಲಿಕೆ ಮಾಡುತ್ತಿರಲಿಲ್ಲ. ನಿಜವಾದ ಅರ್ಹತೆಯಿಂದ ಈ ಪ್ರಶಸ್ತಿಗೆ ಆಯ್ಕೆಯಾದವರಿಗೆ ಈ ಗೊಂದಲಗಳು ಮುಜುಗರವನ್ನುಂಟು ಮಾಡುತ್ತಿದ್ದವು. 
2018ನೇ ಸಾಲಿನ ಪ್ರಶಸ್ತಿಗೆ ಒಟ್ಟು 500 ಜನರನ್ನು ಆಯ್ಕೆ ಮಾಡಲಾಗಿತ್ತು. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದ ಬಳಿಕ ಕೆಲ ಸಾಹಿತಿಗಳು ಹಾಗೂ ರಂಗಕರ್ಮಿಗಳು ಅವ್ಯವಸ್ಥೆಗಳ ಬಗ್ಗೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದರು. 
ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ನಾಯಕ ಎಂ.ಶಿವರಾಜು ಅವರು ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಪ್ರಶಸ್ತಿಗೆ ಮಾನದಂಡಗಳನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT