ರಾಜ್ಯ

ಬೆಂಗಳೂರು: ನೇಣು ಬಿಗಿದುಕೊಂಡು ವೈದ್ಯೆ ಆತ್ಮಹತ್ಯೆ!

Raghavendra Adiga
ಬೆಂಗಳೂರು: ಮನೆಯಲ್ಲಿ ನೇಣು ಬಿಗಿದುಕೊಳ್ಳುವ ಮೂಲಕ  ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ನಂದಿನಿ ಲೇಔಟ್ ನಲ್ಲಿ ನಡೆದಿದೆ.
ನಂದಿನಿ ಲೇಔಟ್ ನ ಸಾಕಮ್ಮ ಬಡಾವಣೆಯಲ್ಲಿ ವಾಸವಿದ್ದ ಅಶ್ವಿನಿ (32) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ನಂದಿನಿ ಲೇಔಟ್ ಷ್ಣಾನಂದ ನಗರದಲ್ಲಿರುವ ಬಿಬಿಎಂಪಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಅಶ್ವಿನಿ ಸೋಮವಾರ ರಾತ್ರಿ ತಮ್ಮ ಮನೆಯಲ್ಲಿನ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಮಂಗಳವಾರ ಬೆಳಿಗ್ಗೆ ಕೊಠಡಿ ಪರೀಕ್ಷಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಮೂರು ವರ್ಷಗಳ ಹಿಂದೆ ಡಾ.ಲೋಹಿತ್ ಜತೆ ವಿವಾಹವಾಗಿದ್ದ ಅಶ್ವಿನಿಗೆ ಪತಿಯು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಇದರಿಂದ ಬೇಸತ್ತ ಆಕೆ ಗಂಡನ ಮನೆ ತೊರೆದು ನಂದಿನಿ ಲೇಔಟ್ ನಲ್ಲಿನ ತಾಯಿ ಮನೆಯಲ್ಲಿ ವಾಸವಿದ್ದರು. ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸರಗೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಅಶ್ವಿನಿ ಪೋಷಕರು ಆರೋಪಿದ್ದಾರೆ.
ಘಟನೆ ಮಾಹಿತಿ ಪಡೆದ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.
ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SCROLL FOR NEXT