ಸಂಗ್ರಹ ಚಿತ್ರ 
ರಾಜ್ಯ

ಹೆಚ್1ಎನ್1 ಮಹಾಮಾರಿ: ರಾಜ್ಯದಲ್ಲಿ 8 ಮಂದಿ ಬಲಿ

ಹೆಚ್1ಎನ್1 ಮಹಾಮಾರಿಗೆ ರಾಜ್ಯದಲ್ಲಿ ಈ ವರೆಗೂ ಒಟ್ಟು 8 ಮಂದಿ ಬಲಿಯಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ...

ಬೆಂಗಳೂರು: ಹೆಚ್1ಎನ್1 ಮಹಾಮಾರಿಗೆ ರಾಜ್ಯದಲ್ಲಿ ಈ ವರೆಗೂ ಒಟ್ಟು 8 ಮಂದಿ ಬಲಿಯಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬಳ್ಳಾರಿಯಲ್ಲಿ ಹೆಚ್1ಎನ್1 ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 
ಹೆಚ್1ಎನ್1 ನಿಂದಾಗಿ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಜಾವೈದ್ ಅಖ್ತರ್ ಅವರು, ಗ್ರಾಮಾಂತರ ಮಟ್ಟದ ಮೇಲ್ವಿಚಾರಣಾ ಸಮಿತಿ ರಚಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಮಂಗಳವಾರ ಸಂಜೆಯವರೆಗೂ ಹೆಚ್1ಎನ್1ಗೆ 542 ಮಂದಿ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ. ಇದರಲ್ಲಿ 54 ಮಂದಿ ಬೆಂಗಳೂರು ಗ್ರಾಮಂತರ ಪ್ರದೇಶಗಳಿಗೆ ಸೇರಿದವರಾಗಿದ್ದಾರೆಂದು ತಿಳಿಸಿದೆ. 
ಇದಲ್ಲದೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದ್ದು, ರೋಗಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಗಳು ಹಾಗೂ ಇತರೆ ಆರೋಗ್ಯ ಸುರಕ್ಷತಾ ಕಾರ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿದರೆ ಸೋಂಕುಗಳು ಹರಡುವುದಿಲ್ಲ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT