ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೈದರಾಬಾದ್‌ಗೆ ತೆರಳಿದ್ದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು, ನಗರಕ್ಕೆ ವಾಪಸ್ ಬಂದು ಖಾಸಗಿ ಆಸ್ಪತ್ರೆಗೆ ದಾಖಲಾದರು. ಕೆಲ ದಿನಗಳ ಹಿಂದೆ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯ ಸುಧಾರಿಸಿದ್ದರೂ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆ ಕಾರಣಕ್ಕೆ ವಿಶ್ವನಾಥ್ ಅವರು ಆಸ್ಪತ್ರೆಯಲ್ಲೇ ಉಳಿದಿದ್ದಾರೆ
ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ವಿಶ್ವನಾಥ್ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಬುಧವಾರ ವಿಶ್ವನಾಥ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆರೋಗ್ಯ ವಿಚಾರಿಸಿದರು.