ಮೈಸೂರು: ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಮೈಸೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪುಟ್ಟಚಿನ್ನಮ್ಮಣಿ ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಜಂಬೂ ಸವಾರಿಗಾಗಿ ಸಕಲ ರೀತಿಯಲ್ಲೂ ಸಿದ್ದಗೊಂಡಿದ್ದ ಅರಮನೆಯಲ್ಲಿ ಪುಟ್ಟಚಿನ್ನಮ್ಮಣಿ ಅವರ ಸಾವಿನಿಂದ ಸೂತಕದ ವಾತಾವರಣ ಆವರಿಸಿಕೊಂಡಿದೆ.
ಇನ್ನೂ ಪ್ರಮೋದಾ ದೇವಿ ಒಡೆಯರ್ ಅವರ ತಾಯಿಯ ಸಾವಿನ ಹಿನ್ನೆಲೆಯಲ್ಲಿ ಅರಮನೆಯಲ್ಲಿನ ಹಲವು ಕಾರ್ಯಕ್ರಮಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.