ಬೆಂಗಳೂರು: ಕೇರಳದ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಪ್ರತಿಯೊಬ್ಬರು ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಮಹಿಳೆಯರ ಪ್ರವೇಶ ವಿರೋಧಿಸಿ ಶಬರಿಮಲೆಯಲ್ಲಿ ಮೂರನೇ ದಿನವೂ ಪ್ರತಿಭಟನೆ ಮುಂದುವರಿದಿದೆ.
ಇತ್ತೀಚೆಗೆ ಸುಪ್ರಿಂಕೋರ್ಟ್ ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು, ತೀರ್ಪಿಗೆ ಕೇರಳದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಮಹಿಳೆಯರ ಪ್ರವೇಶಕ್ಕೆ ತೀವ್ರ ಪ್ರತಿರೋಧ ಒಡ್ಡಲಾಗಿದೆ.