ಬೆಂಗಳೂರು: ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 42 ವರ್ಷದ ಉದ್ಯಮಿ ಹಾಗೂ 12 ವರ್ಷದ ಮಗ ಫ್ಲೈಓವರ್‌ನಿಂದ ಕೆಳಗೆ ಬಿದ್ದು ದುರ್ಮರಣ ಹೊಂದಿರುವ ದಾರುಣ ಘಟನೆ ನಗರ ಆವಲಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಬೆಂಗಳೂರು-ಚೆನ್ನೈ ಹೆದ್ದಾರಿ ಹೊಸಕೋಟೆ ಬಳಿ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಉದ್ಯಮಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟರೇ, ಮಗನ ದೇಹ ಎರಡು ತುಂಡುಗಳಾಗಿದೆ.
ಬ್ರಹ್ಮನಂದ ರೆಡ್ಡಿ ಹಾಗೂ ಅವರ ಮಗ ಮೌನ ಸಾಯಿ ರೆಡ್ಡಿ ಅಪಘಾತದಲ್ಲಿ ಮೃತಪಟ್ಟಿದ್ದು ಅವರು ಕೃಷ್ಣರಾಜಪುರದಿಂದ ಹೊಸಕೋಟೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಆವಲಹಳ್ಳಿಯ ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಳಿಕ ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics