ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಮುಖಂಡ ಹೆಚ್.ಡಿ.ದೇವೇಗೌಡ ಅವರು ಈ ಸಾಲಿನ "ಮಹರ್ಷಿ ವಾಲ್ಮೀಕಿ ಪ್ರಶಸ್ತಿ"ಗೆ ಆಯ್ಕೆಯಾಗಿದ್ದಾರೆ.

ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ
Raghavendra Adiga
Updated On : 23 Oct 2018, 2:52 am
ಬೆಂಗಳೂರು: ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಮುಖಂಡ ಹೆಚ್.ಡಿ.ದೇವೇಗೌಡ ಅವರು ಈ ಸಾಲಿನ "ಮಹರ್ಷಿ ವಾಲ್ಮೀಕಿ ಪ್ರಶಸ್ತಿ"ಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರ ನೀಡುವ ಈ ಪ್ರಶಸ್ತಿ ಆಯ್ಕೆಗಾಗಿ ನಿವೃತ್ತ ನ್ಯಾಯಮೂರ್ತಿ  ಹೆಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿತ್ತು. 
ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತದೆ.

Advertisement

Advertisement

ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಮಾಜಿ ಪ್ರಧಾನಿಗಳಿಗೆ  ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಗಮಿಸಿ ಗೌರವ ಸ್ವೀಕರಿಸುವಂತೆ ಕೋರಿದ್ದಾರೆ.
ಅಕ್ಟೋಬರ್ 24ರಂದು ವಾಲ್ಮೀಕಿ ಜಯಂತಿ ಇದ್ದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ.ಈ ಸಂದರ್ಭ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ತಂದೆಯೂ ಆದ ದೇವೇಗೌಡರಿಗೆ  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments