ಸಿಎಂ ಎಚ್ ಡಿಕೆ 
ರಾಜ್ಯ

ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ: ಧರ್ಮಸ್ಥಳ ಭೇಟಿ ರದ್ದು

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅನಾರೋಗ್ಯದಿಂದ ಪೀಡಿತರಾದ ಕಾರಣ ಅವರ ನಿಯೋಜಿತ ಧರ್ಮಸ್ಥಳ ಭೇಟಿ ರದ್ದಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅನಾರೋಗ್ಯದಿಂದ ಪೀಡಿತರಾದ ಕಾರಣ ಅವರ ನಿಯೋಜಿತ ಧರ್ಮಸ್ಥಳ ಭೇಟಿ ರದ್ದಾಗಿದೆ.
ಕುಮಾರಸ್ವಾಮಿಯವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಬೆಂಗಳೂರಿನ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವ ಅವರು ಇದೀಗ ಮನೆಯಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಕಾರಣದಿಂದ ಧರ್ಮಸ್ಥಳ ಭೇಟಿ ಕೊನೆ ಕ್ಷಣದಲ್ಲಿ ರದ್ದಾಗಿದೆ.
ಧರ್ಮಸ್ಥಳದಲ್ಲಿ ನವೀಕೃತ ಮಂಜೂಷಾ ವಸ್ತು ಸಂಗ್ರಹಾಲಯ ಉದ್ಘಾಟನೆ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಬೇಕಿತ್ತು.
ಮಧ್ಯಾಹ್ನ  ಆಗಮಿಸಲಿರುವ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಸಕಲ ಸಿದ್ದತೆ ನಡೆದಿತ್ತು. ಆದರೆ ಅನಾರೋಗ್ಯದ ಕಾರಣ ಈಗ ಮುಖ್ಯಮಂತ್ರಿಗಳು ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
ರದ್ದಾಗಿರುವ ಕಾರ್ಯಕ್ರಮಗಳ ವಿವರ ಹೀಗಿದೆ:
- ಧರ್ಮಸ್ಥಳ ಭೇಟಿ
- ಕೈಗಾರಿಕೆಗಳಿಗೆ ಬಳಸಲ್ಪಡುವ ನೀರಿನ ದರದ ಪರಿಷ್ಕರಣೆ ಕುರಿತ ಸಭೆ
- ಭಾರತ್ ಗೋಲ್ಡ್ ಮೈನಿಂಗ್ ಕಂಪನಿ, ಕೆಜಿಎಫ್ ಅನ್ನು ಸರ್ಕಾರದ ಸ್ವಾಧೀನಕ್ಕೆ ಪಡೆಯುವ ಸಂಬಂಧದ ಸಭೆ
- ಕೆಪಿಸಿ ಬೋರ್ಡ್ ಮೀಟಿಂಗ್ 
- ಬಿಇಎಂಎಲ್ ವತಿಯಂಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಚೆಕ್ ಸಲ್ಲಿಕೆ
- ಕೆಎಎಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಭೇಟಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT