ಬೆಂಗಳೂರು: ಬೆಂಗಳೂರು ಉತ್ತರದ ಬಾಗಲೂರಿನ ಎರಡು ಕ್ವಾರಿಗಳಲ್ಲಿ ಅಕ್ರಮವಾಗಿ ಹಾಕಿದ್ದ ಘನತ್ಯಾಜ್ಯವನ್ನು ಅಲ್ಲಿಂದ ತೆರವುಗೊಳಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕೆಂಬ ತನ್ನ ಆದೇಶವನ್ನು ಪಾಲಿಸಲು ವಿಫಲವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರೂ.5 ಕೋಟಿ ದಂಡ ಹಾಕಿದೆ ಎಂದು ತಿಳಿದುಬಂದಿದೆ.
ಹಸಿರು ನ್ಯಾಯಾಧೀಕರಣದ ಮುಖ್ಯಸ್ಥ ನ್ಯಾ.ಆದರ್ಶ್ ಕುಮಾರ್ ಗೋಯಲ್, ನ್ಯಾ.ಜಾವದ್ ರಹೀಂ, ನ್ಯಾ.ಎಸ್.ಪಿ.ವಾಂಗ್ಡಿ, ತಜ್ಞ ಸದಸ್ಯ ಡಾ.ನಾಗೀನ್ ನಂದಾ ಅವರನ್ನು ಒಳಗೊಂಡಿದ್ದ ನ್ಯಾಯಪೀಠ ಈ ಆದೇಶವನ್ನು ನೀಡಿದೆ.
ಬಾಗಲೂರಿನ ನಿವಾಸಿ ವೆಂಕಟೇಶ್ ಎಂಬುವವರು 2017ರಲ್ಲಿ ಯಾವುದೇ ಶಾಸನಬದ್ಧ ಅನುಮತಿಯಿಲ್ಲದೆ ಬಾಗಲೂರಿನ ಕ್ವಾರಿಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡಿರುವ ಹಿನ್ನಲೆಯಲ್ಲಿ ಅಂತರ್ಜಲ ಮಾಲೀನ್ಯ, ಆರೋಗ್ಯ ಹಾನಿ ಸಂಭವಿಸಿದೆ. ಬಿಬಿಎಂಪಿಯು ಘನತ್ಯಾಜ್ಯ ನಿರ್ವಹಣಾ ನಿಯಮ-2016ನ್ನು ಉಲ್ಲಂಘಿಸಿದೆ ಎಂದು ಹಸಿರು ನ್ಯಾಯಾಧೀಕರಣದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಹಸಿರು ನ್ಯಾಯಾಧೀಕರಣವು ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಸಚಿವಾಲಯ, ಕೇಂದ್ರ ಮಾಲೀನ್ಯ ನಿಯಂತ್ರಣ ಮಂಡಳಿಗಳಿಗೆ ಜಂಟಿಯಾಗಿ ಸ್ಥಳ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿತ್ತು.
ಈ ವರದಿಯಲ್ಲಿ ಬಿಬಿಎಂಪಿ ಲೋಕ ಎಶಗಿರುವುದು ಸ್ಪಷ್ಟವಾಗಿತ್ತು. ಈ ಹಿನ್ನಲೆಯಲ್ಲಿ ನ್ಯಾಯಾಧೀಕರಣವು, ತನ್ನ ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಬಿಬಿಎಂಪಿಗೆ ಸೂಚಿಸಿತ್ತು. ಬಿಬಿಎಂಪಿಯ ವಿಫಲತೆ ಯಾವುದೇ ಸಮರ್ಥನೆಗಳಿಲ್ಲ. ಆದ್ದರಿಂದ ಆದೇಶ ಪಾಲನೆಗೆ ಹೆಚ್ಚಿನ ಸಮಯ ನೀಡಬೇಕೆಂಬ ಬಿಬಿಎಂಪಿ ಮನವಿ ಪುರಸ್ಕರಿಸಲು ಸಾಧ್ಯವೇ ಇಲ್ಲ ಎಂದು ಹೇಳಿರುವ ನ್ಯಾಯಾಲಯ ದಂಡವನ್ನು ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics