ಉಡುಪಿ: ಅಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯವಾಗಿರುವ ಘಟನೆ ನಡೆದಿದೆ.
ಉಡುಪಿಯ ಕೋಟ ಮಣೂರು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಉತ್ತರಕನ್ನಡ ಮೂಲದವರು ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಮೂವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಇಲ್ಲಿನ ಮಣೂರು ಮಹಾಲಿಂಗೇಶ್ವರ ದೇಗುಲದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನ 1.30 ರ ವೇಳೆ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಹಾರಿ ಪಲ್ಟಿಯಾಗಿ ಭೀಕರ ಅವಘಡ ಸಂಭವಿಸಿದೆ. ಅವಘಡದಲ್ಲಿ ಆ್ಯಂಬುಲೆನ್ಸ್‌ನಲ್ಲಿ ದ್ದ ರೋಗಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆ್ಯಂಬುಲೆನ್ಸ್‌ನಲ್ಲಿ ಕಾರವಾರದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸಲಾಗುತ್ತಿತ್ತು.
ಮೃತ ದುರ್ದೈವಿಗಳು ಕಾರವಾರದ ಆಮದಳ್ಳಿಯ ನಿವಾಸಿಗಳಾದ ಉಲ್ಲಾಸ್ ತಳೇಕರ್(45), ಅಶೋಕ್(37)ಮತ್ತು ಶೈಲೇಶ್ ಎಂದು ತಿಳಿದು ಬಂದಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics