ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ 
ರಾಜ್ಯ

ಚಿಕಿತ್ಸೆ ಬಳಿಕ ಲಂಡನ್'ನಿಂದ ತವರಿಗೆ ಮರಳಿದ ಅನಂತ್ ಕುಮಾರ್

ಅನಾರೋಗ್ಯಕ್ಕೀಡಾಗಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಬೆಂಗಳೂರು ನಗರಕ್ಕೆ ವಾಪಸ್ಸಾಗಿದ್ದಾರೆ...

ಬೆಂಗಳೂರು: ಅನಾರೋಗ್ಯಕ್ಕೀಡಾಗಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಬೆಂಗಳೂರು ನಗರಕ್ಕೆ ವಾಪಸ್ಸಾಗಿದ್ದಾರೆ. 
ಅನಂತ್ ಕುಮಾರ್ ಅವರು ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಲಂಡನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನ್ಯೂಯಾರ್ಕ್'ಗೆ ತೆರಳಿದ್ದರು. 
ಕಳೆದ ತಿಂಗಳು ನ್ಯೂಯಾರ್ಕ್ ನಲ್ಲಿಯೇ ತಮ್ಮ 60ನೇ ವರ್ಷದ ಹುಟ್ಟಹಬ್ಬವನ್ನೂ ಆಚರಿಸಿದ್ದರು. ಪ್ರಸ್ತುತ ನಗರಕ್ಕೆ ಆಗಮಿಸಿರುವ ಅನಂತ್ ಕುಮಾರ್ ಅವರು ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 
ಕೇವಲ ಕುಟುಂಬ ಸದಸ್ಯರು ಮಾತ್ರ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಆಪ್ತ ಗೆಳೆಯರಾಗಲೀ, ಬಿಜೆಪಿ ನಾಯಕರಿಗಾಗಲೀ ಭೇಟಿಗೆ ಅವಕಾಶ ನೀಡಿಲ್ಲ ಎಂದು ಹೇಳಲಾಗುತ್ತಿದೆ. 
ಅನಂತ್ ಕುಮಾರ್ ಅವರು ಬೆಂಗಳೂರಿಗೆ ಸುರಕ್ಷಿತವಾಗಿ ಆಗಮಿಸಿದ್ದು, ಇದೀಗ ಅವರ ಆರೋಗ್ಯ ಸುಧಾರಿಸಿದೆ. 15 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!