ಬೆಂಗಳೂರು: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ನಗರದ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಂಸದೀಯ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಇಂದು ಬೆಳಗ್ಗೆ ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅನಂತ್ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದು, ಸಂಜೆ ರಾಜನಾಥ್ ಸಿಂಗ್ ಅವರೂ ಕೂಡ ಬೆಂಗಳೂರಿಗೆ ಆಗಮಿಸಿ, ಅನಂತ್ಕುಮಾರ್ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಅನಂತ್ಕುಮಾರ್ ಅವರು ಶ್ವಾಸಕೋಶದ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದ್ದು, ಬಸವನಗುಡಿಯ ಶಂಕರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಸುಮಿತ್ರಾ ಮಹಾಜನ್ ಅವರು ಅನಂತ್ಕುಮಾರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು.