ಮಹೇಶ್ 
ರಾಜ್ಯ

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂತೆಂದು ನೇಣಿಗೆ ಶರಣಾದ ಆಟೋ ಚಾಲಕ!

ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.
ಗೂಳಿಪುರ ನಿವಾಸಿ ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ (26) ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಎರಡು ವರ್ಷದ ಹಿಂದೆ ನಡೆದ ಅಪಘಾತವೊಂದರ ಸಂಬಂಧ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಾಲಯದಿಂದ ನೋಟೀಸ್ ಬಂದಿತ್ತು ಎನ್ನಲಾಗಿದ್ದು ನೋಟೀಸ್ ನೋಡಿ ಗಾಬರಿಯಾಗಿದ್ದ ಮಹೇಶ್ "ತಾನು ಜೈಲಿಗೆ ಹೋದರೇನು ಗತಿ!" ಎಂದು ಭಯದಿಂದ ನೇಣಿಗೆ ಶರಣಾಗಿದ್ದಾನೆ.
ಭಾನುವಾರ ಮನೆಯಲ್ಲಿ ಊಟ್ ಮಾದಿ ಹೊರ ಹೋಗಿದ್ದ ಮಹೇಶ್ ಗ್ರಾಮದ ಹೊರಗಿದ್ದ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೋಮವಾರ ಬೆಳಿಗ್ಗೆ ವರೆಗೆ ಮಹೇಸ್ ಮನೆಗೆ ವಾಪಾಸಾಗದ್ದನ್ನು ಕಂಡ ಕುಟುಂಬದವರು ಅವನ ಹುಡುಕಾಟದಲ್ಲಿದ್ದಾಗ ಮರಕ್ಕೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ.
ಘಟನೆ ಸಂಬಂಧ ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!