ಬೆಂಗಳೂರು: ಕಾರು ಹಿಂದಿಕ್ಕುವಾಗ ಅಪಘಾತ, ಎಂಜಿನಿಯರ್ ವಿದ್ಯಾರ್ಥಿ ಸಾವು 
ರಾಜ್ಯ

ಬೆಂಗಳೂರು: ಕಾರು ಹಿಂದಿಕ್ಕುವಾಗ ಅಪಘಾತ, ಎಂಜಿನಿಯರ್ ವಿದ್ಯಾರ್ಥಿ ಸಾವು

ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ...

ಬೆಂಗಳೂರು: ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ. 
ಹೆಬ್ಬಾಳದ ಕೆಂಪಾಪುರ ನಿವಾಸಿ ಸಚಿನ್ (20) ಮೃತ ವಿದ್ಯಾರ್ಥಿ. ಘಟನೆಯಲ್ಲಿ ಇಂಡಿಕಾ ಕಾರು ಚಾಲಕ ಅಪ್ಸರ್ (32) ಹಾಗೂ ಲಕ್ಷ್ಮೀ ವರದರಾಜ್ (61) ಎಂಬುವವರು ಗಾಯಗೊಂಡಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪರಡೆಯುತ್ತಿದ್ದಾರೆ. 
ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಚಿನ್, ನಿನ್ನೆ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ 1.50ರ ಸುಮಾರಿಗೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಕೊಡಿಗೇಹಳ್ಳಿ ಸಮೀಪ ವೇಗವಾಗಿ ಕಾರು ಚಾಲನೆ ಮಾಡಿದ್ದಾನೆ. 
ಈ ವೇಳೆ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರನ್ನು ಹಿಂದಿಕ್ಕುವ ಭರದಲ್ಲಿ ಇನ್ನೋವಾ ಕಾರಿಗೆ ಡಿಕ್ಕಿಯಾಗಿ ಬಳಿಕ ಆಲ್ಟೋ ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಚಿನ್, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆಂದು ಪೊಲೀಸರು ಹೇಳಿದ್ದಾರೆ, 
ಲಕ್ಷ್ಮೀ ವರದರಾಜ್ ಅವರು ಮೂಲತಃ ತೆಲಂಗಾಣ ರಾಜ್ಯದವರಾಗಿದ್ದು, ಜಯನಗರದಲ್ಲಿನ ಸಂಬಂಧಿಕೊಬ್ಬರ ಮನೆಗೆ ಬಂದಿದ್ದರು. ವಾಪಸ್ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೋಗುವಾಗ ದುರ್ಘಟನೆ ನಡೆದಿದೆ. 
ಸಚಿನ್ ಚಾಲನೆ ಮಾಡುತ್ತಿದ್ದ ಆಲ್ಟೋ ಕಾರಿನಲ್ಲಿ ದಾಖಲೆಗಳು ಪತ್ತೆಯಾಗಿಲ್ಲ. ಇನ್ನಷ್ಟೇ ಅವುಗಳನ್ನು ಪತ್ತೆ ಹಚ್ಚಬೇಕಿದೆ. ಅತಿ ವೇಗದಿಂದ ಚಾಲನೆ ಮಾಡಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಇದ್ದಾರೆ. ಪ್ರಕರಣ ಸಂಬಂಧ ಹೆಬ್ಬಾಳ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT