ಸಂಗ್ರಹ ಚಿತ್ರ 
ರಾಜ್ಯ

ಅಪರೂಪದ ಫಲಿತಾಂಶ; ಕೈ, ಜೆಡಿಎಸ್, ಬಿಜೆಪಿ ಮೂಲೆಗುಂಪು, ಎಲ್ಲಾ ವಾರ್ಡ್ ಗಳಲ್ಲೂ ಪಕ್ಷೇತರರ ಗೆಲುವು!

ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶಗಳು ಹೊರಬೀಳುತ್ತಿದ್ದು, ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆ ಕೆಲ ಅಚ್ಚರಿಗಳಿಗೆ ಕಾರಣವಾಗಿದೆ.

ಬೆಳಗಾವಿ: ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶಗಳು ಹೊರಬೀಳುತ್ತಿದ್ದು, ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆ ಕೆಲ ಅಚ್ಚರಿಗಳಿಗೆ ಕಾರಣವಾಗಿದೆ.
ರಾಜ್ಯದ ಬಹುತೇಕ ಎಲ್ಲಾ ಕಡೆ ರಾಷ್ಟ್ರೀಯ ಪಕ್ಷಗಳ ಭರಾಟೆಯಾದರೆ, ಬೆಳಗಾವಿ ಜಿಲ್ಲೆಯ ಪುರಸಭೆಯೊಂದರಲ್ಲಿ ಮಾತ್ರ ಮತದಾರರು ಪ್ರಮುಖ ಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನೇ ಮೂಲೆಗುಂಪು ಮಾಡಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ಕೊಣ್ಣೂರು ಪುರಸಭೆಯ ಎಲ್ಲ ವಾರ್ಡ್ ಗಳಲ್ಲೂ ಪಕ್ಷೇತರ ಅಭ್ಯರ್ಥಿಗಳೇ ಗೆಲುವು ಸಾಧಿಸುವ ಮೂಲಕ ಅಪರೂಪದ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ. ಪುರಸಭೆಯ ಒಟ್ಟು 17 ವಾರ್ಡ್ ಗಳಲ್ಲಿ ಪಕ್ಷೇತರರು ಜಯಭೇರಿ ಭಾರಿಸಿದ್ದು, ಇಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮೂಲೆಗುಂಪಾಗಿದೆ.  ಇಲ್ಲಿ ಮತದಾರರು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾರಿಗೂ ಒಂದು ಸ್ಥಾನವೂ ನೀಡದೇ ಪಕ್ಷೇತರರಿಗೆ ಪುರಸಭೆಯ ಚುಕ್ಕಾಣಿ ನೀಡಿದ್ದಾರೆ. ಆ ಮೂಲಕ ಇಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲ ಎಂಬುದನ್ನು ಮತದಾರರು ಸಾಬೀತುಪಡಿಸಿದ್ದಾರೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!