ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಒಟ್ಟಾರೆ ಕಾಂಗ್ರೆಸ್ ಗೆ 846 ಗೆಲುವು, ಬಿಜೆಪಿಗೆ 778
ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೂ ಬಂದಿರುವ ಫಲಿತಾಂಶದಂತೆ ಕಾಂಗ್ರೆಸ್ 846 ಸ್ಥಾನಗಳಲ್ಲಿ ಗೆಲುವು ದಾಖಲಿಸುವುದರೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ.
ಬೆಂಗಳೂರು :ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೂ ಬಂದಿರುವ ಫಲಿತಾಂಶದಂತೆ ಕಾಂಗ್ರೆಸ್ 846 ಸ್ಥಾನಗಳಲ್ಲಿ ಗೆಲುವು ದಾಖಲಿಸುವುದರೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ.
ಒಟ್ಟಾರೇ, 2664 ಸ್ಥಾನಗಳ ಪೈಕಿ 2267 ಸ್ಥಾನಗಳ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಕಾಂಗ್ರೆಸ್ 846 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಬಿಜೆಪಿ 788 ಹಾಗೂ ಜೆಡಿಎಸ್ 307 ಸ್ಥಾನಗಳಲ್ಲಿ ಜಯ ಗಳಿಸಿದ್ದರೆ ಉಳಿದ ಸ್ಥಾನಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.
ರಾಜ್ಯದ ಮೂರು ನಗರ ಪಾಲಿಕೆಯ 135 ವಾರ್ಡ್, 29 ನಗರ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಯ ಒಟ್ಟು 2, 529 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಈ ಹಿಂದೆ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಲಾಗಿತ್ತು.
ಆದಾಗ್ಯೂ, ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಕೊಡಗು ಜಿಲ್ಲೆಯ ಮೂರು ಕಡೆಗಳಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.