ಬೆಂಗಳೂರು: ನಗರ ಪ್ರದಕ್ಷಿಣೆ ವೇಳೆ ರಸ್ತೆಯ ಕೆಸರು ಬಟ್ಟೆಗೆ ಸಿಡಿದಿದ್ದಕ್ಕೆ, ಸ್ಥಳದಲ್ಲೇ ಗನ್‍ಮ್ಯಾನ್‍ನಿಂದ ಬಟ್ಟೆ ಹಾಗೂ ಶೂಗಳನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಚ್ಛಮಾಡಿಸಿಕೊಂಡಿದ್ದಾರೆ.
ಹಲಸೂರು ಬಳಿಯಿರುವ ಗುರುದ್ವಾರದ ಮಳೆ ನೀರುಗಾಲುವೆಗೆ ಮೊದಲು ಭೇಟಿ ನೀಡಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ರಸ್ತೆ ಮೇಲಿದ್ದ ನೀರು ಸಚಿವರ ಬಟ್ಟೆ ಹಾಗೂ ಶೂಗೆ ಸಿಡಿದಿದೆ. ಕೂಡಲೇ ಅಲ್ಲೇ ಇದ್ದ ತಮ್ಮ ಗನ್‍ಮ್ಯಾನ್ ಹಾಗೂ ಸಹಾಯಕರಿಗೆ ಸ್ವಚ್ಛಮಾಡುವಂತೆ ತಿಳಿಸಿದ್ದಾರೆ.
ಈ ವೇಳೆ ಗನ್‍ಮ್ಯಾನ್ ತಮ್ಮ ಕರವಸ್ತ್ರದ ಮೂಲಕವೇ ಸಚಿವರ ಬಟ್ಟೆ ಹಾಗೂ ಶೂಗಳನ್ನು ಸ್ವಚ್ಛ ಮಾಡಿದ್ದಾರೆ. ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮಾಧ್ಯಮಗಳ ಮುಂದೆಯೇ ಡಿಸಿಎಂ ಈ ರೀತಿ ವರ್ತಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.