ರಾಜ್ಯ

ಬೀದಿ ಬದಿ ವರ್ತಕರಿಗೆ ಸಿಎಂ ಎಚ್,ಡಿ ಕುಮಾರಸ್ವಾಮಿ 'ಬಡವರ ಬಂಧು'!

Shilpa D
ಬೆಂಗಳೂರು: ಮಧ್ಯವರ್ತಿಗಳು ಹಾಗೂ ಮೀಟರ್‌ ಬಡ್ಡಿ ದಂಧೆಯನ್ನು ತಪ್ಪಿಸಲು ಸರ್ಕಾರವು ಬಡವರ ಬಂಧು ಎನ್ನುವ ಯೋಜನೆಯನ್ನು ಜಾರಿಗೊಳಿಸುತ್ತಿದೆ.  
ಸಚಿವ ಬಂಡೆಪ್ಪ ಕಾಂಶೆಂಪೂರ್ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ  ನಿನ್ನೆ ಬೇಟಿ ನೀಡಿ ಅಲ್ಲಿನ ವರ್ತಕರ ಜತೆಗೆ ಮಾತುಕತೆ ನಡೆಸಿದರು.
ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯಾದ ಬಡವರ ಬಂಧು ಯೋಜನೆ ಜಾರಿಗೊಳಿಸುವ ಮುನ್ನ ಸಹಕಾರ ಸಚಿವರು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಹಾಜರಿದ್ದರು
ಮೀಟರ್ ಬಡ್ಡಿ ದಂಧೆ ತಪ್ಪಿಸಲು ಮೊಬೈಲ್ ಅಪ್ಲಿಕೇಷನ್ ಮೂಲಕ ಧನ ಸಹಾಯ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ, ಜತೆಗೆ ಸರ್ಕಾರವು ದಿನದ ಬಡ್ಡಿ ರಹಿತ ಸಾಲವನ್ನು ನೀಡಲು ಮುಂದಾಗಿದೆ. ಇದರ ಉಪಯೋಗವನ್ನು ವ್ಯಾಪಾರಿಗಳು ಪಡೆದುಕೊಳ್ಳಬೇಕು ಎಂದರು.
ಈ ಯೋಜನೆ ಕುಮಾರ ಸ್ವಾಮಿ ಅವರ ಕನಸಿನ ಕೂಸಾಗಿದ್ದು, ಸಾಲಮನ್ನಾ ನಂತರ ಈ ಯೋಜನೆ ಕೂಡ ಮಹತ್ವಾದ್ದಾಗಿದೆ.
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಈ ಯೋಜನೆ ಜಾರಿಗೆ ತರಲಾಗುವುದು. ಮೊದಲ ಹಂತದಲ್ಲಿ 50 ಸಾವಿರ ರಸ್ತೆ ಬದಿ ವ್ಯಾಪಾರಿಗಳು ನೋಂದಾಯಿಸಿಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಸುಮಾರು 2 ಲಕ್ಷ ವ್ಯಾಪಾರಸ್ಥರು ಇದರ ಲಾಭ ಪಡೆಯಬಹುದಾಗಿದೆ,
ಬೀದಿ ಬದಿ ವ್ಯಾಪಾರಿಗಳು ಪ್ರತಿದಿನ ವ್ಯಾಪಾರಕ್ಕೆ ಅಗತ್ಯವಿರುವ ಹಣವನ್ನು ಬೆಳಗ್ಗೆ ಪಡೆದು ರಾತ್ರಿ ವಾಪಸ್ ಮಾಡಬೇಕಾಗುತ್ತದೆ. ಇದರಿಂದ ಖಾಸಗಿ ವ್ಯಕ್ತಿಗಳಿಂದ ಹೆಚ್ಚು ಬಡ್ಡಿಗೆ ಹಣ ಪಡೆದು ಕಿರುಕುಳಕ್ಕೆ ಒಳಗಾಗುವುದನ್ನು ತಪ್ಪಿಸಬೇಕಾಗಿದೆ. ಆ ಮೂಲಕ ಮೀಟರ್ ಬಡ್ಡಿ ದಂಧೆಗೂ ಕಡಿವಾಣ ಹಾಕುವುದು ಸರ್ಕಾರದ ಉದ್ದೇಶವಾಗಿದೆ.
SCROLL FOR NEXT