ಜಿ ಪರಮೇಶ್ವರ 
ರಾಜ್ಯ

ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ, ಸೆಸ್​ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಡಿಸಿಎಂ

ಡೀಸೆಲ್ ಬೆಲೆ ಸತತ ಏರಿಕೆಯಾಗುತ್ತಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿರ್ವಾಯವಾಗಿದೆ....

ತುಮಕೂರು: ಡೀಸೆಲ್ ಬೆಲೆ ಸತತ ಏರಿಕೆಯಾಗುತ್ತಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿರ್ವಾಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ. ಸ್ಪಷ್ಟಪಡಿಸಿದ್ದಾರೆ.
ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ ಅವರು​, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ 16 ಬಾರಿ ಇಂಧನ ಬೆಲೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದಾಗಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಬೇಕಾಗಿದೆ. ಇಲ್ಲದಿದ್ದರೆ ಸಂಸ್ಥೆ ನಷ್ಟಕ್ಕೆ ಗುರಿಯಾಗುತ್ತದೆ ಎಂದರು.
ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲಿಸಲಾಗುತ್ತಿದೆ ಎಂದರು.
ಇದೇ ವೇಳೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್​ ಅನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ನಿನ್ನೆಯಷ್ಟೆ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಬಸ್ ಪ್ರಯಾಣ ದರ ಏರಿಕೆ ವಿಷಯ ಪ್ರಸ್ತಾಪಿಸಿದ್ದರು. ಅದಕ್ಕೆ ಪೂರಕವೆಂಬಂತೆ ಇಂದು ಉಪ ಮುಖ್ಯಮಂತ್ರಿ ಪರಮೇಶ್ವರ್​ ಕೂಡ ಟಿಕೆಟ್​ ದರ ಏರಿಕೆ ಬಗ್ಗೆ ಮಾತನಾಡಿರುವುದು ಗಮನಿಸಿದರೆ ಸದ್ಯದಲ್ಲೇ ಪ್ರಯಾಣಿಕರಿಗೆ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಮನೆ ಗೇಟ್ ಮೇಲೆ 'ಗದ್ದರ್ ಜ್ಞಾನೇಶ್' ಬರಹ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್; 6 ಮಂದಿ ಬಂಧನ!

ಏಕದಿನ ಕ್ರಿಕೆಟ್‌ನಲ್ಲಿ 200ನೇ ವಿಕೆಟ್ ಪಡೆದು ಎಲೈಟ್ ಕ್ಲಬ್ ಸೇರಿದ ಕುಲದೀಪ್ ಯಾದವ್

ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್; ನವೆಂಬರ್ ಒಳಗೆ ಬಾಕಿ ಬಿಲ್​​ ಪಾವತಿಸದಿದ್ದರೆ ದಾಖಲೆ ಬಿಡುಗಡೆ: ಮತ್ತೆ ಸಿಡಿದೆದ್ದ ಗುತ್ತಿಗೆದಾರರು

SIR ಪ್ರಕ್ರಿಯೆ ಪೂರ್ಣಗೊಂಡ ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಲ್ಲಿ ಫಾರ್ಮ್-6 ರದ್ದು: ಕೇಂದ್ರ ಚುನಾವಣಾ ಆಯೋಗ

'ಪ್ರಜಾಪ್ರಭುತ್ವ ಉಳಿಸಿ' ರ‍್ಯಾಲಿ ನಡೆಸಲು 'ಇಂಡಿಯಾ' ಮೈತ್ರಿಕೂಟ ನಿರ್ಧಾರ; ಅ. 6 ರಂದು ಚು. ಆಯೋಗದ ಕಡೆಗೆ ವಿಪಕ್ಷ ಸಂಸದರ ನಡೆ!