ನಟ ಯಶ್ 
ರಾಜ್ಯ

ಡಿಸೆಂಬರ್ ನೊಳಗೆ ಬಾಡಿಗೆ ಕಟ್ಟಿ, ಇಲ್ಲವೇ ಮನೆ ಖಾಲಿ ಮಾಡಿ: ನಟ ಯಶ್ ತಾಯಿಗೆ 'ಹೈ'​ ತಾಕೀತು

ಡಿಸೆಂಬರ್ ಒಳಗೆ ಮನೆ ಬಾಡಿಗೆ ಕಟ್ಟಿ, ಇಲ್ಲವೆ ಮನೆ ಖಾಲಿ ಮಾಡಿ ಎಂದು ರಾಕಿಂಗ್ ಸ್ಟಾರ್ ಯಶ್ ಅವರ​ ತಾಯಿಗೆ...

ಬೆಂಗಳೂರು: ಡಿಸೆಂಬರ್ ಒಳಗೆ ಮನೆ ಬಾಡಿಗೆ ಕಟ್ಟಿ, ಇಲ್ಲವೆ ಮನೆ ಖಾಲಿ ಮಾಡಿ ಎಂದು  ರಾಕಿಂಗ್ ಸ್ಟಾರ್ ಯಶ್ ಅವರ​ ತಾಯಿಗೆ ಹೈಕೋರ್ಟ್​ ಬುಧವಾರ ತಾಕೀತು ಮಾಡಿದೆ.
ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಯಶ್ ತಾಯಿ ಪುಷ್ಪಾ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೋಪಣ್ಣ ಹಾಗೂ ಶ್ರೀನಿವಾಸ್ ಹರೀಶ್‌ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಕೆಳ ನ್ಯಾಯಾಲಯದ ಆದೇಶ ಎತ್ತಿಹಿಡಿದಿದೆ.
ಯಶ್ ತಾಯಿಗೆ 23.27 ಲಕ್ಷ ರು. ಬಾಡಿಗೆ ಪಾವತಿಸುವಂತೆ ಸೂಚನೆ ನೀಡಿರುವ ನ್ಯಾಯಾಲಯ,​​ ತಕ್ಷಣ ಪಾವತಿಸಿದರೆ ಮುಂದಿನ ಮಾರ್ಚ್​ 31ರ ವರೆಗೆ ಇರಬಹುದು. ಇಲ್ಲವಾದಲ್ಲಿ ಡಿಸೆಂಬರ್ ಒಳ​​ಗೆ ಬಾಡಿಗೆ ಕಟ್ಟಿ ಮನೆ ಖಾಲಿ ಮಾಡುವಂತೆ ಆದೇಶಿಸಿದೆ.
2010ರ ಅಕ್ಟೋಬರ್ 16ರಿಂದ ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸದಲ್ಲಿ ವಾಸವಿರುವ ಯಶ್ ಮತ್ತು ಅವರ ಕುಟುಂಬ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ನಟ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಮೂರು ತಿಂಗಳಲ್ಲಿ ಮನೆ ಖಾಲಿ ಮಾಡುವಂತೆ ಮತ್ತು ಮನೆ ಬಾಡಿಗೆ ಬಾಕಿ 9 ಲಕ್ಷ 60 ಸಾವಿರ ಮನೆ ಮಾಲೀಕರಿಗೆ ಪಾವತಿಸುವಂತೆ ಆದೇಶಿಸಿತ್ತು. ಆದರೆ ಪುಷ್ಪ ಅವರು ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!