ಖಾಸಗಿ ಲೇವಾದೇವಿಗಾರರ ಕಿರುಕುಳದಿಂದ ತಪ್ಪಿಸಲು 24/7 ಸಹಾಯವಾಣಿಗೆ ಚಿಂತನೆ
ಸಣ್ಣ ರೈತರು, ಕೂಲಿ ಕಾರ್ಮಿಕರು ಮತ್ತು ಸಮಾಜದ ಇತರ ದುರ್ಬಲ ವರ್ಗದವರಿಗೆ ಖಾಸಗಿ ...
ಬೆಂಗಳೂರು: ಸಣ್ಣ ರೈತರು, ಕೂಲಿ ಕಾರ್ಮಿಕರು ಮತ್ತು ಸಮಾಜದ ಇತರ ದುರ್ಬಲ ವರ್ಗದವರಿಗೆ ಖಾಸಗಿ ಲೇವಾದೇವಿಗಾರರಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯ ಪೊಲೀಸ್ ಮುಖ್ಯಸ್ಥರು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರು ಮತ್ತು ಆಯುಕ್ತರು ಸಹಾಯವಾಣಿಯನ್ನು ತೆರೆಯಬೇಕೆಂದು ನಿರ್ದೇಶಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ನಿನ್ನೆ ಆದೇಶ ಹೊರಡಿಸಿದ ರಾಜ್ಯ ಡಿಜಿ ಮತ್ತು ಐಜಿಪಿ ನೀಲಮಣಿ ರಾಜು, 24/7 ಸಹಾಯವಾಣಿಯನ್ನು ಆರಂಭಿಸಿ ಅದನ್ನು ಸಬ್ ಇನ್ಸ್ ಪೆಕ್ಟರ್ ರ್ಯಾಂಕಿನ ಅಧಿಕಾರಿಗಳು ನಿರ್ವಹಿಸಬೇಕು, ಮತ್ತು ಜನರಿಂದ ದೂರುಗಳು ಬಂದ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ಲೇವಾದೇವಿಗಾರರ ಕಾಯ್ದೆ-1961, ಕರ್ನಾಟಕ ಪಾನ್ ಬ್ರೋಕರ್ಸ್ ಕಾಯ್ದೆ-1961, ಚಿಟ್ ಫಂಡ್ ಕಾಯ್ದೆ-1982 ಮತ್ತು ಕರ್ನಾಟಕ ಪ್ರೊಹಿಬೀಷನ್ ಆಫ್ ಚಾರ್ಜಿಂಗ್ ಎಕ್ಸೊರ್ಬಿಟೆಂಟ್ ಇಂಟರೆಸ್ಟ್ ಕಾಯ್ದೆ-2004 ರಡಿ ಜನರಿಗೆ ಕಿರುಕುಳ ನೀಡುವ ಖಾಸಗಿ ಲೇವಾದೇವಿಗಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನೀಲಮಣಿ ರಾಜು ಆದೇಶದಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.