ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ನಾನು ನಗರ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಹೈಕೋರ್ಟ್ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಎನ್'ಪಿ ಅಮೃತೇಶ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೃತೇಶ್ ಅವರು, ಕಾರ್ನಾಡ್ ವಿರುದ್ಧ ದೂರು ದಾಖಲಿಸಿದ್ದೇನೆ. ಪೊಲೀಸರು ನಕ್ಸಲ್ ಸಂಪರ್ಕ ಕುರಿತಂತೆ ಕಾರ್ನಾಡ್ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಹೇಳಿದ್ದಾರೆ.
ದೂರು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾರ್ನಾಡ್ ಅವರು, ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜೀವಿಸುತ್ತಿದ್ದೇವೆ. ದೂರು ದಾಖಲು ಮಾಡುವ ಹಕ್ಕು ನನಗಿದೆ. ಏನನ್ನು ಹೇಳಬೇಕು, ಏನನ್ನು ಮಾಡಬೇಕೆಂಬ ಹಕ್ಕು ನನಗಿದೆ. ಕಾನೂನು ಮುಂದಿನ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.