ದಾವಣಗೆರೆ: ಡಿವೈಡರ್‌ಗೆ ಕಾರು ಡಿಕ್ಕಿ; ಬೆಂಗಳೂರಿನ ನಾಲ್ವರ ದುರ್ಮರಣ
ಹರಗನಹಳ್ಳಿಯಲ್ಲಿ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ...
ದಾವಣಗೆರೆ: ಹರಗನಹಳ್ಳಿಯಲ್ಲಿ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿನಯ್ (27), ಅಜಯ್ (32) ವಿನಯ್ (30) ಸ್ಥಳದಲ್ಲಿಯೇ ಸಾವನ್ನಪ್ಪಿದರೇ, ಸಿದ್ದಪ್ಪ (28) ಎಂಬಾತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಡಿಟಿಡಿಸಿ ಕೊರಿಯರ್ ಉದ್ಯೋಗಿಗಳಾಗಿದ್ದರು. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಅತೀವೇಗದಲ್ಲಿ ಚಲಿಸುತ್ತಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕೆಎ 42. ಎಂ 9491 ಕ್ರಿಯೇಟ್ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.