ಸಂಗ್ರಹ ಚಿತ್ರ 
ರಾಜ್ಯ

ಗಣೇಶ ಹಬ್ಬಕ್ಕೆ ಹೆಚ್ಚುವರಿ ಕೆಎಸ್ಆರ್'ಟಿಸಿ ಬಸ್

ಗೌರಿ-ಗಣೇಶ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ವಿವಿಧ ಸ್ಥಳ ಹಾಗೂ ಇತರೆ ರಾಜ್ಯಗಳ ಊರುಗಳಿಗೆ ತೆರಳಲು ಕೆಎಸ್ಆರ್'ಟಿಸಿ ಹೆಚ್ಚುವರಿಯಾಗಿ 1,200 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ...

ಬೆಂಗಳೂರು: ಗೌರಿ-ಗಣೇಶ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ವಿವಿಧ ಸ್ಥಳ ಹಾಗೂ ಇತರೆ ರಾಜ್ಯಗಳ ಊರುಗಳಿಗೆ ತೆರಳಲು ಕೆಎಸ್ಆರ್'ಟಿಸಿ ಹೆಚ್ಚುವರಿಯಾಗಿ 1,200 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. 
ಸೆ.11 ಮತ್ತು 12ರಂದು ಬೆಂಗಳೂರಿನಿಂದ, ಸೆ.16 ರಂದು ಬೆಂಗಳೂರು ಕಡೆಗೆ ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಕೆಎಸ್ಆರ್'ಟಿಸಿ ತಿಳಿಸಿದೆ. 
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಕಡೆಗೆ ಬಸ್ ಹೊರಡಿವೆ. 
ಮೈಸೂರು ರಸ್ತೆ ಸ್ಯಾಟ್'ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರ ಟಿಟಿಎಂಸಿಯಿಂದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಹವಾನಿನಿಯಂತ್ರಣ ಬಸ್ ಕಾರ್ಯಾಚರಣೆಗೊಳ್ಳಲಿದೆ. 
ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರ ಮುಂಭಾಗದಿಂದ ವಿಶೇಷ ಬಸ್ ಸೇವೆ ಕಲ್ಪಿಸಲಾಗಿದೆ. ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರಿಗೆ ಸಂಖ್ಯೆಗೆ ಅನುಗುಣವಾಗಿ ಶಿವಮೊಗ್ಗ, ದಾವಣೆಗೆರೆ, ತಿರುಪತಿ, ಮಂಘಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್ಆರ್'ಟಿಸಿ ತಿಳಿಸಿದೆ. 
ಹೆಚ್ಚುವರಿ ವಿಶೇಷ ಬಸ್ ಗಳಲ್ಲು ಮುಂಗಡವಾಗಿ ಕೆಎಸ್ಆರ್''ಟಿಸಿ ವೆಬ್ಸೈಟ್ ಮೂಲಕ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!