ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ರಾಜ್ಯದಲ್ಲಿ ಎಐಟಿಯುಸಿ, ಸಿಐಟಿಯು, ಓಲಾ, ಉಬರ್ ಬೆಂಬಲ
ಬೆಂಗಳೂರು: ತೈಲ ಬೆಲೆ ಏರಿಕೆ ಹಾಗೂ ತೆರಿಗೆ ಹೆಚ್ಚಿಸುತ್ತಿರುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ ಸೆ.10 ರಂದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆ ಇದೆ.
ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಐಟಿಯುಸಿ, ಎಡಪಕ್ಷಗಳ ಸಹ ಸಂಘಟನೆಗಳು ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಇದ್ದು, ಜೆಡಿಎಸ್ ಸಹ ಸಮ್ಮತಿ ಸೂಚಿಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕೇಂದ್ರ ಸರ್ಕಾರ ತೆರಿಗೆ ಹೆಚ್ಚಿಸುತ್ತಿದ್ದು, ಪೆಟ್ರೋಲ್ ದರ ಏರಿಕೆಯ ಮೇಲೆ ಇದು ಪರಿಣಾಮ ಬೀರಿದೆ ಈ ಹಿನ್ನೆಲೆಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 82 ರೂಪಾಯಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಕರೆ ನೀಡಲಾಗಿರುವ ಭಾರತ್ ಬಂದ್ ಗೆ ಕೆಎಸ್ ಆರ್ ಟಿಸಿ ನೌಕರರು, ಓಲಾ, ಉಬರ್ ಚಾಲಕರು ಹಾಗೂ ಮಾಲಿಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು ಸೋಮವಾರದಂದು ಟ್ಯಾಕ್ಸಿ ಸೇವೆ ಮೇಲೆ ಪರಿಣಾಮ ಬೀರಲಿದೆ.
ಬಿಜೆಪಿ 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಶೇ.118 ರಷ್ಟು ತೆರಿಗೆಗಳನ್ನು ಹೆಚ್ಚಿಸಿಸಿದೆ, ತೈಲ ಬೆಲೆ ಶೇ.424 ರಷ್ಟು ಏರಿಕೆಯಾಗಿದೆ, ಆದ್ದರಿಂದ ರಾಜ್ಯ ಕಾಂಗ್ರೆಸ್ ಕಾಂಗ್ರೆಸ್ ಭಾರತ್ ಬಂದ್ ಗೆ ಬೆಂಬಲ ನೀಡಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics