ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ

ಪ್ರತ್ಯೇಕ ಪ್ರಕರಣಗಳಲ್ಲಿ ವಿಧಾನಸೌಧ ಹಾಗೂ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ  ವಿಧಾನಸೌಧ ಹಾಗೂ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕನ್ನಿಂಗ್ ಹ್ಯಾಮ್ ರಸ್ತೆಯ ಬೆಂಗಳೂರು ಗ್ರಾಮಾಂತರ ಪೊಲೀಸ್  ಮಹಾನಿರ್ದೇಶಕರ ಕಚೇರಿ ಬಳಿಯ ಮರವೊಂದಕ್ಕೆ 42 ವರ್ಷದ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನನ್ನು ಮೊಹಮ್ಮದ್ ಬಿ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಈತ ಕಳೆದ ನಾಲ್ಕು ವರ್ಷಗಳಿಂದ ಕ್ಲಬ್ ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಸದಸ್ಯತ್ವ ತೆಗೆದುಹಾಕುವಂತೆ ಸದಸ್ಯರು ಒತ್ತಾಯಿಸಿದ್ದರು ಎನ್ನಲಾಗಿದೆ. ಹೈಗ್ರೌಂಡ್ಸ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿಧಾನಸೌಧ ಬಳಿ ಅಪಾರ್ಟ್ ಮೆಂಟ್ ಬಳಿಯ ಶೆಡ್ ನಲ್ಲಿ ದಿನಗೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು  ಲಿಂಗಯ್ಯ (30) ಎಂದು ಗುರುತಿಸಲಾಗಿದೆ. ಇವರು ಚಾಮರಾಜನಗರದವರು ಎಂಬುದು ತಿಳಿದುಬಂದಿದೆ.

ಸಂಬಂಧಿಕರು ಅಥವಾ  ಪರಿಚಯಸ್ಥರು   ಸಹಾಯವಾಣಿ 080 -25497777 ಅಥವಾ 104 ಆರೋಗ್ಯ ಸಹಾಯವಾಣಿ ಸಂಪರ್ಕಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT