ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ವಲಸಿಗರು, ವಿದೇಶಿಯರಿಗೆ ಬ್ರೇಕ್ ಹಾಕಲು ಸರ್ಕಾರ ಬಂಧನ ಕೇಂದ್ರ ಸ್ಥಾಪನೆ

ಅಕ್ರಮ ವಲಸಿಗರು ಮತ್ತು ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ...

ಬೆಂಗಳೂರು: ಅಕ್ರಮ ವಲಸಿಗರು ಮತ್ತು ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ಅಂತವರನ್ನು ಗುರುತಿಸಿ ಬಂಧಿಸಲು ಮುಂದಾಗಿದೆ. ಅಲ್ಲದೆ ಅವರನ್ನು ಬೆಂಗಳೂರಿನ ನೆಲಮಂಗಲ ಸಮೀಪ ಬಂಧನ ಕೇಂದ್ರದಲ್ಲಿಡಲು ಸಿದ್ದತೆಗಳಾಗುತ್ತಿದ್ದು ಮುಂದಿನ ವರ್ಷ ಜಾರಿಗೆ ಬರಲಿದೆ.

ಕೇಂದ್ರ ಗೃಹ ಸಚಿವಾಲಯ ಕಳುಹಿಸಿದ ಪತ್ರದ ಆಧಾರದ ಮೇಲೆ ರಾಜ್ಯ ಸರ್ಕಾರ ಬಂಧನ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದೆ. ಈ ಪತ್ರಕ್ಕೆ ಗೃಹ ಇಲಾಖೆ ವ್ಯವಹಾರಗಳ ಕೇಂದ್ರ ಸಚಿವಾಲಯದ ಅಧೀನ ಕಾರ್ಯದರ್ಶಿ ಪಿ ಸಿ ಗೈಟ್ ಸಹಿ ಮಾಡಿದ್ದಾರೆ.

ವೀಸಾ ಅವಧಿ ಮುಗಿದರೂ ಕೂಡ ಭಾರತದ ಪ್ರಮುಖ ನಗರಗಳಲ್ಲಿ ನೆಲೆಯನ್ನು ಮುಂದುವರಿಸುವ ವಿದೇಶಿಗರು ಮತ್ತು ಅಕ್ರಮವಾಗಿ ನೆಲೆಸುವ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಇತ್ತೀಚೆಗೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಬೆಂಗಳೂರು ಸಮೀಪ ನೆಲಮಂಗಲದಲ್ಲಿ ಬಂಧನ ಕೇಂದ್ರ ಸದ್ಯದಲ್ಲಿಯೇ ಸ್ಥಾಪನೆಯಾಗಲಿದೆ. ನಮಗೆ ಕೇಂದ್ರ ಸರ್ಕಾರದಿಂದ ಪತ್ರ ಬಂದಿದ್ದು ಸದ್ಯದಲ್ಲಿಯೇ ಕೇಂದ್ರ ಕಾರ್ಯರೂಪಕ್ಕೆ ಬರಲಿದೆ ಎಂದು ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್ ತಿಳಿಸಿದ್ದಾರೆ.

ಆಫ್ರಿಕಾ ಮತ್ತು ಬಾಂಗ್ಲಾದೇಶದಿಂದ ಹಲವು ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಹಲವು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಪತ್ತೆಯಾಗಿದೆ.

ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನ್ನು ನೆಲಮಂಗಲದ ಆವರಣವನ್ನು ಬಂಧನ ಕೇಂದ್ರವನ್ನಾಗಿ ತೆರೆಯಲು ನಿರ್ಧರಿಸಿದೆ. ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಇಲಾಖೆಯ ಎಡಿಜಿಪಿ ಕಮಲ್ ಪಂತ್, ಕಟ್ಟಡದ ಪುನರ್ ನವೀಕರಣ ಸದ್ಯದಲ್ಲಿಯೇ ಆರಂಭವಾಗಲಿದೆ. ಇದಕ್ಕಾಗಿ ಕಾರ್ಯವಿಧಾನವನ್ನು ರೂಪಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ