ರಾಜ್ಯ

ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳು ಶೀಘ್ರ ಭರ್ತಿ: ಆರ್. ಶಂಕರ್

Nagaraja AB

ಬೆಂಗಳೂರು: ಅರಣ್ಯ ಇಲಾಖೆಯ ವಿವಿಧ ದರ್ಜೆಯ 3085 ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಿದ್ದು, ಶೀಘ್ರದಲ್ಲಿ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ.

ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ  ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದಿದ್ದರೆ 20 ಲಕ್ಷ, ಶಾಶ್ವತ ಅಂಗವಿಕಲರಾದರೆ 10 ಲಕ್ಷ, ಗಂಭೀರ ಸ್ವರೂಪದ ಗಾಯಗಳಾದರೆ  2 ಲಕ್ಷ ಪರಿಹಾರ ಮತ್ತು 10 ಲಕ್ಷ ವಿಶೇಷ ಗುಂಪು  ವಿಮಾ ಮೊತ್ತವನ್ನು  ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಭಾರತೀಯ ಅರಣ್ಯ ಸಮೀಕ್ಷೆ ವರದಿ ಪ್ರಕಾರ 2015-17ರ ಅವಧಿಯಲ್ಲಿ  ರಾಜ್ಯದಲ್ಲಿ ಅರಣ್ಯ ಮತ್ತು ವೃಕ್ಷ ಹೂದಿಕೆಯು 1, 26, 200 ಹೆಕ್ಟೇರ್ ಗಳಷ್ಟು ಹೆಚ್ಚಾಗಿದ್ದು, ವನ್ಯಜೀವಿಗಳ ಸಂಖ್ಯೆಯೂ ಹೆಚ್ಚಾಗಿದೆ. ವನ್ಯಜೀವಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಇದೆ ಎಂದು ಸಚಿವರು ತಿಳಿಸಿದರು.

 ನಾಗರಹೊಳೆ ಕಾಡ್ಗಿಚ್ಚು ಸಂದರ್ಭದಲ್ಲಿ ಹಠಾತ್ತನೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ  ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಅರಣ್ಯ  ಸಂರಕ್ಷಣಾಧಿಕಾರಿ ಎಸ್ .ಮಣಿಕಂದನ್ ಅವರನ್ನು ಇದೇ ಸಂದರ್ಭದಲ್ಲಿ ಸಚಿವರು ಸ್ಮರಿಸಿದರು.

SCROLL FOR NEXT