ಸಂಗ್ರಹ ಚಿತ್ರ 
ರಾಜ್ಯ

ಬಿಎಂಟಿಸಿ ಬಸ್-ಕಾರು ನಡುವೆ ಭೀಕರ ಅಪಘಾತ, ನಾಲ್ವರ ದುರ್ಮರಣ

ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮರಳುವಾಗ ಬಿಎಂಟಿಸಿ ಬಸ್ ಗೆ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿರುವ ಘಟನೆ ನಗರದ... ದೊಡ್ಡನಕ್ಕುಂದಿ ಬಳಿ ಸಂಭವಿಸಿದೆ...

ಬೆಂಗಳೂರು: ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮರಳುವಾಗ ಬಿಎಂಟಿಸಿ ಬಸ್ ಗೆ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿರುವ ಘಟನೆ ನಗರದ ದೊಡ್ಡನಕ್ಕುಂದಿ ಬಳಿ ಸಂಭವಿಸಿದೆ. 
ಮಾರತ್ ಹಳ್ಳಿ ಮೂಲದ ಚಾಲಕ ನವೀನ್, ರೀನಾ, ಎಲ್ಲಸಮ್ಮ ಹಾಗೂ ನಿರ್ಮಲ ಮೃತ ದುರ್ದೈವಿಗಳಾಗಿದ್ದು ಶೀಜಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಹಳೆಯ ವಿಮಾನ ನಿಲ್ದಾಣ ರಸ್ತೆ ಬಳಿ ಈ ದುರ್ಘಟನೆ ಸಂಭವಿಸಿದೆ. ನವೀನ್ ಸೇರಿದಂತೆ ಐವರು ಸ್ಯಾಂಟ್ರೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎದುರಿಗೆ ಬರುತ್ತಿದ್ದ ವೋಲ್ವೋ ಬಸ್ ಗೆ ಡಿಕ್ಕಿ ಹೊಡೆದಿದೆ. 
ಭೀಕರ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಇನ್ನು ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮೃತಪಟ್ಟಿದ್ದು ಗಾಯಾಳು ಮಹಿಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ ಎಂದು ಸಂಚಾರಿ ವಿಭಾಗದ ಡಿಸಿಪಿ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್