ಹುಬ್ಬಳ್ಳಿ: ಮಹಿಳೆಯರನ್ನು ಸಲಿಂಗಕಾಮಕ್ಕ ಬಳಸಿಕೊಳ್ಳುತ್ತಿದ್ದಳು ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ.
ಮಾದಕ ವ್ಯಸನಿಯಾಗಿದ್ದ ಮಹಿಳೆ, ಪ್ರತೀನಿತ್ಯ ಮಹಿಳೆಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದಳು. ಇದರಂತೆ ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಮನೆಗೆ ಕರೆದುಕೊಂಡು ಬಂದಿರುವುದನ್ನು ಕಂಡ ಸ್ಥಳೀಯರು ಮಹಿಳೆಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಘಟನೆಯ ವಿಡಿಯೋವನ್ನು ಮಾಡಲಾಗಿದೆ. ಘಟನೆ ಬಳಿಕ ಸ್ಥಳೀಯ ರಾಜಕೀಯ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಣೆ ಮಾಡಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ತಿಳಿಸಿದ್ದಾರೆ.
ಮಹಿಳೆಗೆ ಥಳಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೊಲೀಸರು ಘಟನೆಯ ವಿಡಿಯೋವನ್ನು ನೋಡಿದ್ದೇವೆ. ಆದರೆ, ಈ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಹೇಳಿದ್ದಾರೆ.
ಸಲಿಂಗಕಾಮ ಆರೋಪ ಹೊತ್ತಿರುವ ಮಹಿಳೆ ಕರೆದುಕೊಂಡು ಬಂದಿದ್ದ ಮಹಿಳೆಯ ಕುಟುಂಬಸ್ಥರು ಆಕೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಹುಡುಕಾಟದ ವೇಳೆ ಮಹಿಳೆ ದೊರಕಿದ್ದಾಳೆ. ಬಳಿಕ ಮಹಿಳೆಯ ಸಹೋದರರು ಹಾಗೂ ಸ್ಥಳೀಯರು ಆರೋಪ ಹೊತ್ತಿರುವ ಮಹಿಳೆಯ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics