ಸಂಗ್ರಹ ಚಿತ್ರ 
ರಾಜ್ಯ

ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ, ಮಗನ ಸಾವಿನ ಸುದ್ದಿ ಕೇಳಿ ತಂದೆ ಕೂಡ ಸಾವು!

ಪುತ್ರ ಶೋಕಂ ನಿರಂತರಂ ಅನ್ನುವಂತೆ ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಆಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ...

ಶಿವಮೊಗ್ಗ: ಪುತ್ರ ಶೋಕಂ ನಿರಂತರಂ ಅನ್ನುವಂತೆ ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಆಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 
ಮೆದುಳು ನಿಷ್ಕ್ರಿಯಗೊಂಡಿರುವುದರಿಂದ 32 ವರ್ಷದ ಹರೀಶ್ ಬದುಕುಳಿಯುವುದಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಆತನ ತಂದೆ 59 ವರ್ಷದ ಬಾಲಕೃಷ್ಣ ಎಂಬುವರು ಆಘಾತಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಒಂದೇ ಮನೆಯಲ್ಲಿ ಎರಡೆರಡು ಸಾವಿನ ಸುದ್ದಿಯಿಂದ ಸಂಬಂಧಿಕರು, ಜೇಡಿಕಟ್ಟೆ ಗ್ರಾಮ ಹಬ್ಬದ ಮಾರನೇ ದಿನವೇ ಸೂತಕದ ಛಾಯೆಯಲ್ಲಿದೆ. 
ಇನ್ನು ಹರೀಶ್ ಬದುಕುಳಿಯುವುದಿಲ್ಲ ಎಂದು ತಿಳಿದ ಪೋಷಕರು ಮಗನ ಅಂಗಾಂಗ ದಾನ ಮಾಡಲು ತೀರ್ಮಾನಿಸಿದ್ದು ಅದರಂತೆ ಆತನ ದೇಹವನ್ನು ಶುಕ್ರವಾರ ಬೆಳಗ್ಗೆ ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಕೊಂಡೊಯ್ಯಲಾಯಿತು. 
ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವೈದ್ಯರು ಯುವಕನ ಅಂಗಾಂಗಗಳನ್ನು ತೆಗೆದುಕೊಂಡಿದ್ದು ನಂತರ ಯುವಕನ ಮೃತದೇಹವನ್ನು ಭದ್ರಾವತಿಯ ಜೇಡಿಕಟ್ಟೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT