ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಬರಮಾಡಿಕೊಂಡ ರಾಜ್ಯಪಾಲ ವಜುಬಾಯಿ ವಾಲಾ ಮತ್ತು ಸಚಿವ ರಮೇಶ್ ಜಾರಕಿಹೊಳಿ 
ರಾಜ್ಯ

ಮಹತ್ತರ ಬದಲಾವಣೆ ಪರ್ವದಲ್ಲಿ ಭಾರತ; ರಾಮನಾಥ ಕೋವಿಂದ್

ಭಾರತ ದೇಶ ಮಹತ್ತರ ಬದಲಾವಣೆಯ ಮಧ್ಯಭಾಗದಲ್ಲಿದ್ದು ಇಂದು ತೆಗೆದುಕೊಂಡ ನಿರ್ಧಾರಗಳು ತಕ್ಷಣದ ...

ಬೆಳಗಾವಿ: ಭಾರತ ದೇಶ ಮಹತ್ತರ ಬದಲಾವಣೆಯ ಮಧ್ಯಭಾಗದಲ್ಲಿದ್ದು ಇಂದು ತೆಗೆದುಕೊಂಡ ನಿರ್ಧಾರಗಳು ತಕ್ಷಣದ ಭವಿಷ್ಯದ ಮೇಲೆ ಪ್ರಭಾವ ಬೀರುವುದು ಮಾತ್ರವಲ್ಲದೆ ಉಳಿತ ಶತಮಾನದ ಮೇಲೆ ಕೂಡ ಪ್ರಭಾವ ಬೀರಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಿನ್ನೆ ಕರ್ನಾಟಕ ಕಾನೂನು ಸೊಸೈಟಿ ಮತ್ತು ರಾಜ ಲಕಮಗೌಡ ಕಾನೂನು ಕಾಲೇಜಿನ ಬೆಳ್ಳಿಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಯುವ ಪ್ರತಿಭಾವಂತ ಜನರಿದ್ದು ಉತ್ತೇಜಕ ಆರ್ಥಿಕ ಅವಕಾಶಗಳು ಗರಿಗೆದರುತ್ತಿವೆ. ಹಿಂದಿನ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇಕಡಾ 8.2ರಷ್ಟು ಬೆಳವಣಿಗೆಯಾಗಿದ್ದು ಇದು ನಮ್ಮ ದೇಶದ ಆರ್ಥಿಕ ಬೆಳವಣಿಗೆಯ ವೇಗ ಮತ್ತು ಸಂಭಾವ್ಯತೆಯನ್ನು ತೋರಿಸುತ್ತದೆ. ನಾವು ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಯುಗದಲ್ಲಿ ಜೀವಿಸುತ್ತಿದ್ದೇವೆ ಎಂದು ಹೇಳಿದರು.

ನಾಲ್ಕನೇ ಕೈಗಾರಿಕಾ ಕ್ರಾಂತಿ ಈ ದೇಶದಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬ ಬದಲಾವಣೆಯನ್ನು ತೋರಿಸುತ್ತದೆ. ನಮ್ಮ ಶಿಕ್ಷಣ ಸಂಸ್ಥೆಗಳು ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ತುಡಿಯುತ್ತಿದ್ದು ಅದು 21ನೇ ಶತಮಾನದಲ್ಲಿ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ