ಕಲಬುರಗಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತಲಾ 2 ರೂಪಾಯಿ ಇಳಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿತ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಈ ನಿಟ್ಟಿನಲ್ಲಿ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ದರ ಇಳಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳು ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಎಲ್ಲ ಇಲಾಖೆಗಳಲ್ಲೂ ಗುರಿ ಮೀರಿ ತೆರಿಗೆ ಸಂಗ್ರಹವಾಗಿರುವುದನ್ನು ಹಾಗೂ ಅಭಿವೃದ್ಧಿ ಚಟುವಟಿಕೆ ಸೇರಿ ರೈತರ ಸಾಲ ಮನ್ನಾ ಹಣಕಾಸಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬ ಮಾಹಿತಿ ಇಲಾಖಾವಾರು ಅಧಿಕಾರಿಗಳಿಂದ ಸಿಕ್ಕ ನಂತರ ಮುಖ್ಯಮಂತ್ರಿಗಳು ತೈಲದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ .
ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆಯೇ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos