ಹೆಚ್ ಡಿ ರೇವಣ್ಣ 
ರಾಜ್ಯ

ಇನ್ನೊಂದು ವರ್ಷದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆ: ಹೆಚ್ ಡಿ ರೇವಣ್ಣ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ರೆಲಸಕ್ಕೆ ಸುಮಾರು 7,190 ಕೋಟಿ ರೂಪಾಯಿ ...

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ರೆಲಸಕ್ಕೆ ಸುಮಾರು 7,190 ಕೋಟಿ ರೂಪಾಯಿ ವೆಚ್ಚವಾಗಲಿದ್ದು ಇನ್ನು ಒಂದೂವರೆ ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ಲೇನ್ ಹೆದ್ದಾರಿಯ ಬೈಪಾಸ್ ರಸ್ತೆಗೆ ಕಾಮಗಾರಿ ಈಗಾಗಲೇ ರಾಮನಗರ ಮತ್ತು ಬಿಡದಿ ಸಮೀಪ ಈಗಾಗಲೇ ಆರಂಭವಾಗಿದೆ. ರಾಮನಗರ, ಚೆನ್ನಪಟ್ಟಣ, ಮಂಡ್ಯದ ಹೆದ್ದಾರಿಗಳಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಎಲೆವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಹೇಳಿದರು.

ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ವಿಸ್ತರಿಸಲು ಇರುವ ಹಣದ ಅವಶ್ಯಕತೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮೊದಲ ಹಂತದಲ್ಲಿ 56.02 ಕಿಲೋ ಮೀಟರ್ ಉದ್ದದ ರಸ್ತೆಯನ್ನು 2,190 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು ಅದಕ್ಕೆ ಭೂಮಿ ಖರೀದಿಗೆ 1,700 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದರು.

ಅದೇ ರೀತಿ ಎರಡನೇ ಹಂತದ ಕಾಮಗಾರಿಗೆ 69.01 ಕಿಲೋ ಮೀಟರ್ ಉದ್ದದ ರಸ್ತೆ ನಿರ್ಮಾಣ ಕಾಮಗಾರಿಯನ್ನು 2,169 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಇದಕ್ಕೆ ಭೂಮಿ ಖರೀದಿಗೆ 1,131 ಕೋಟಿ ರೂಪಾಯಿ ವೆಚ್ಚವಾಗಲಿದೆ. ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ 23 ಕಿಲೋ ಮೀಟರ್ ವರೆಗೆ, ಬಿಡದಿಯಲ್ಲಿ (11 ಕಿಲೋ ಮೀಟರ್), ರುದ್ರಾಕ್ಷಿಪುರ ಮತ್ತು ಮದ್ದೂರು ಹಾಗೂ ನಿಡಘಟ್ಟ ಮತ್ತು ಮಂಡ್ಯ ಮಧ್ಯೆ 11 ಕಿಲೋ ಮೀಟರ್ ಹೆದ್ದಾರಿ ನಿರ್ಮಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ