ಮಹಾದೇವಿ 
ರಾಜ್ಯ

ಒಂದು ದಿನಕ್ಕೆ ಕನಿಷ್ಟ ಮೂರು ಚಿನ್ನದ ಚೈನ್ ಕದಿಯಬೇಕು: ಪತಿಗೆ ಪತ್ನಿ ಟಾರ್ಗೆಟ್!

ಪತಿ ಕೈಯಲ್ಲಿ ಸರಗಳ್ಳತನ ಮಾಡಿಸುತ್ತಿದ್ದ ಪತ್ನಿ, ಪ್ರತಿ ದಿನ ಕನಿಷ್ಟ ಮೂರು ಚೈನ್ ಕಳ್ಳತನ ಮಾಡಬೇಕು.....

ಬೆಂಗಳೂರು: ಪತಿ ಕೈಯಲ್ಲಿ ಸರಗಳ್ಳತನ ಮಾಡಿಸುತ್ತಿದ್ದ ಪತ್ನಿ, ಪ್ರತಿ ದಿನ ಕನಿಷ್ಟ ಮೂರು ಚೈನ್ ಕಳ್ಳತನ ಮಾಡಬೇಕು ಎಂದು ಪತಿಗೆ ಟಾರ್ಗೆಟ್ ನೀಡುತ್ತಿದ್ದ ಕತರ್ನಾಕ್ ಪತ್ನಿ ಮಹಾದೇವಿ(29)ಯನ್ನು ಕೆಂಗೇರಿ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು 100 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಕುಖ್ಯಾತ ಚೈನ್ ಸ್ನ್ಯಾಚರ್ ಅಚ್ಯುತ್ ಕುಮಾರ್ ಪತ್ನಿ ಮಹಾದೇವಿಗಾಗಿ ಕೆಂಗೇರಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ಹುಡುಕಾಟ ನಡೆಸುತ್ತಿದ್ದರು. 
ಮೂರು ತಿಂಗಳ ಹಿಂದೆ ಅಚ್ಯುತ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದರು. ಪತಿಯ ಬಂಧನದ ಬಳಿಕ ಮಹಾದೇವಿ ತಲೆಮರೆಸಿಕೊಂಡಿದ್ದಳು. ಸೋಮವಾರ ಖಚಿತ ಮಾಹಿತಿ ಪಡೆದ ಕೆಂಗೇರಿ ಪೊಲೀಸರು ಮಹಾದೇವಿಯನ್ನು ಬಂಧಿಸಿದ್ದಾರೆ.
ಆರೋಪಿ ಮಹಾದೇವಿ ಐಷಾರಾಮಿ ಜೀವನಕ್ಕಾಗಿ ಸರಗಳ್ಳತನ ಮಾಡುವಂತೆ ಪತಿಯನ್ನು ಒತ್ತಾಯಿಸಿದ್ದಳು ಎಂದು ಅಚ್ಯುತ್ ಕುಮಾರ್ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.
ಮಹಾದೇವಿ ಐಷಾರಾಮಿ ಜೀವನಕ್ಕಾಗಿ ಮೊದಲ ಪತಿಗೆ ಕೈಕೊಟ್ಟು ಅಚ್ಯುತ್ ಕುಮಾರ್ ನನ್ನು ಮದುವೆಯಾಗಿದ್ದಳು. ಅಷ್ಟೇ ಅಲ್ಲದೇ ಮಹಾದೇವಿ ದಿನಕ್ಕೆ ಕನಿಷ್ಟ ಮೂರ್ನಾಲ್ಕು ಸರಗಳ್ಳತನ ಮಾಡಲೇಬೇಕೆಂದು ಗಂಡನಿಗೆ ತಾಕೀತು ಮಾಡಿದ್ದಳು. ಹೆಂಡತಿ ಮಾತಿನಂತೆಯೇ ಅಚ್ಯುತ್ ಕುಮಾರ್ ಕಳ್ಳತನ ಮಾಡುತ್ತಿದ್ದನ್ನು ಎನ್ನುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಒಂದೇ ವರ್ಷದಲ್ಲಿ ಅಚ್ಯುತ್ ಕುಮಾರ್ ಸುಮಾರು ಒಂದು ಕೋಟಿ ರು. ಬೆಲೆಬಾಳುವ ಸರಗಳ್ಳತನ ಮಾಡಿದ್ದನು. ಆದರೆ ಮೂರು ತಿಂಗಳ ಹಿಂದೆ ನೈಸ್ ರೋಡ್ ಬಳಿ ಆರೋಪಿ ಅಚ್ಯುತ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT