ಬೆಂಗಳೂರು: ಸೆ.24ರೊಳಗಾಗಿ ಬೆಂಗಳೂರನ್ನು ಗುಂಡಿ ಮುಕ್ತ ನಗರವಾಗಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.
ವಿಚಾರಣೆ ವೇಳೆ ನಗರ 8 ಪ್ರದೇಶಗಳಲ್ಲಿ 898 ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನುಳಿದ 2,172 ಗುಂಡಿಗಲನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಈ ವೇಳೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್'ಜಿ ಪಂಡಿತ್ ಅವರಿದ್ದ ಪೀಠ ಪ್ರತಿಕ್ರಿಯೆ ನೀಡಿ, ಸೆ.24ರೊಳಗಾಗಿ ನಗರವನ್ನು ಗುಂಡಿ ಮುಕ್ತ ನಗರವಾಗಿಸುವಂತೆ ಆದೇಶಿಸಿದ್ದಾರೆ.
ನಿನ್ನೆ ನಡೆದ ವಿಚಾರಣೆ ವೇಳೆ ಬಿಬಿಎಂಪಿಗೆ ನ್ಯಾಯಾಲಯ ಮೌಖಿಕವಾಗಿ ಆದೇಶ ನೀಡಿ, ಗುರುವಾರದೊಳಗಾಗಿ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿತ್ತು. ಈ ಕುರಿತಂತೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದ ಬಿಬಿಎಂಪಿ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿತ್ತು.