ಬಳ್ಳಾರಿ: ಬಳ್ಳಾರಿಯ ಹೊಸಪೇಟೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದ ಪರಿಣಾಮ ಓರ್ವ ಬಾಲಕಿ ಮೃತಪಟ್ಟಿದ್ದು 33 ಮಂದಿ ಗಾಯಗೊಂಡಿದ್ದಾರೆ.
ಚಿತ್ ವಾಡಿ ಲೇಔಟ್ ನಲ್ಲಿ ಮೊಹರಂ ಆಚರಣೆಯನ್ನು ವೀಕ್ಷಿಸಲು ಹಲವು ಮಂದಿ ಈ ಕಟ್ಟಡದ ಮೇಲೆ ನಿಂತಿದ್ದರು. ಈ ವೇಳೆ ಕಟ್ಟಡ ಕುಸಿದಿದ್ದು 14 ವರ್ಷದ ಬಾಲಕಿ ಸಾವನ್ನಪ್ಪಿದ್ದು 33 ಮಂದಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ಉಷಾ ಎಂದು ಗುರುತಿಸಲಾಗಿದೆ.
ಇನ್ನು ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇವರ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.