ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ಕೊಡಗು ಪ್ರವಾಹ: ಸಿಎಂ ಪರಿಹಾರ ನಿಧಿಯಿಂದ ನಿರಾಶ್ರಿತ ಕುಟುಂಬಗಳಿಗೆ ರೂ.50,000 ಪರಿಹಾರ

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ...

ಬೆಂಗಳೂರು: ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ. 
ಕಳೆದ ಆಗಸ್ಟ್ ತಿಂಗಳಿನಲ್ಲಿ ಸಾವಿನ ಮಳೆ ಹಾಗೂ ಭೀಕರ ಪ್ರವಾಹ ಸೃಷ್ಟಿಯಾದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆ ಸಂಪೂರ್ಣವಾಗಿ ನಾಶಗೊಂಡಿದೆ. ಪ್ರವಾಹದ ಪರಿಣಾಮ ಸಾಕಷ್ಟು ಮಂದಿ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. 
ಪ್ರವಾಹ ಪೀಡಿತ ಕೊಡಗು ಜಿಲ್ಲೆಗಾಗಿ ರಾಜ್ಯದ ಜನತೆ ಮಿಡಿದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾಕಷ್ಟು ಸಹಾಯ ಧನವನ್ನು ನೀಡಿದ್ದು, ಇದೀಗ ಸಿಎಂ ಪರಿಹಾರ ನಿಧಿಯಲ್ಲಿ ಸಾಕಷ್ಟು ಮೊತ್ತ ಸಂಗ್ರಹವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಧನ ಸಹಾಯ ಮಾಡಲು ಸರ್ಕಾರ ಮುಂದಾಗಿದೆ. 
ಇದರಂತೆ ಕೊಡಗಿನ 1500 ಕುಟುಂಬಗಳಿಗೆ ಪರಿಹಾರ ನೀಡಲು ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಹಣಕಾಸು ಇಲಾಖೆ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿಯೂ ಪರಿಹಾರ ಧನ ವಿತರಿಸುವ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ